ಬೆಳಗಾವಿ ನಗರದ ಅನಗೋಳದ ದುರ್ಗಾ ಕಾಲೊನಿಯಲ್ಲಿ ಪತ್ನಿಯ ಕಿರುಕುಳದಿಂದ ನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುನೀಲ್ ಮೂಲಿಮನಿ (33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ತನ್ನದೇ ಕಂಪ್ಯೂಟರ್ ಶಾಪ್‌ನಲ್ಲಿ ವೈಯರ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಲ್ಕು ವರ್ಷಗಳ ಹಿಂದೆ ಪೂಜಾ ಎಂಬಾಕೆಯನ್ನು ಸುನೀಲ್ ಮದುವೆಯಾಗಿದ್ದ, ದಂಪತಿಗೆ ಮೂರು ವರ್ಷದ ಮಗು ಇದೆ.
ಆತ್ಮಹತ್ಯೆಗೂ ಮುನ್ನ ʻಮೈ ವೈಫ್ ಈಸ್ ರಿಜನ್ ಫಾರ್ ಮೈ ಡೆತ್ʼ ಅಂತ ಡೆತ್‌ನೋಟ್ ಬರೆದಿಟ್ಟಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ಶಿಫ್ಟ್ ಮಾಡಲಾಗಿದ್ದು, ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.