ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಳಲಿ ಗ್ರಾಮದಲ್ಲಿ ಸಾಲದ ವಿಚಾರದಲ್ಲಿ ಮರ್ಯಾದೆಗೆ ಅಂಜಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸತೀಶ್ (27) ಆತ್ಮಹತ್ಯೆಗೆ ಮಾಡಿಕೊಂಡ ಯುವಕ.
ಆತ ಗ್ರಾಮದ ನಾಗೇಶ್ ಎಂಬಾತನ ಬಳಿ ಸಾಲ ಪಡೆದಿದ್ದ. 80 ಸಾವಿರ ಸಾಲ ವಾಪಸ್ ಕೊಟ್ಟಿಲ್ಲ ಎಂದು ಮೃತ ಸತೀಶನ ಅಣ್ಣ ಕುಮಾರ್ ಗೆ ನಾಗೇಶ್ ಪೋನ್ ಮಾಡಿದ್ದ. ಹುಣಸೆ ಮರಕ್ಕೆ ಕಟ್ಟಿಹಾಕಿ ಬಟ್ಟೆ ಬಿಚ್ಚಿ ಹೊಡೆಯುತ್ತೇನೆ ಎಂದು ಬೆದರಿಸಿದ್ದ.
ಮರ್ಯಾದೆಗೆ ಅಂಜಿ ಸತೀಶ್ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಲಕೊಟ್ಟ ನಾಗೇಶ್ ಹಾಗೂ ಕುಮಾರ್ ಮಾತುಕತೆ ಆಡಿಯೋ ವೈರಲ್ ಆಗಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ರಾಣೆಬೆನ್ನೂರಿನಲ್ಲಿ ರಸ್ತೆ ಅಪಘಾತಕ್ಕೆ ಮೂವರು ಬಲಿ
ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ತಿದ್ದ ಟ್ರ್ಯಾಕ್ಟರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲೇ ಅಸು ನೀಗಿದ್ದಾರೆ.
20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಮನಸಾಬ್ ಕೆರಿಮತ್ತಿಹಳ್ಳಿ 65 ವರ್ಷ, ಮಾಬುಸಾಬ್ ದೊಡ್ಡಗುಬ್ಬಿ 65 ವರ್ಷ, ನಿಂಗಮ್ಮ ಜಿಗಳೇರ್ (70) ಮೃತಪಟ್ಟವರು.
ಮೃತರು ದಾವಣಗೆರೆ ಮಲೇಬೆನ್ನೂರಿನ ನಿವಾಸಿಗಳು. ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ರಾಣೇಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.