Menu

ರಾಜಶೇಖರ್ ಸಾವಿನ ಕುರಿತು ಸಿಬಿಐ ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ

ಬಳ್ಳಾರಿ: ಮುಖ್ಯಮಂತ್ರಿಗಳು ರಾಜಶೇಖರ್ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು, ಚೆಲ್ಲಾಟ ಆಡದೇ ಸಮಗ್ರ ತನಿಖೆ ಮಾಡಿಸಬೇಕು. ಬಡ ಕುಟುಂಬಕ್ಕೆ ನ್ಯಾಯ ಸಿಗಲು ಸಿಬಿಐ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ  ಆಗ್ರಹಿಸಿದ್ದಾರೆ. ಇಂದು ಮೃತ ರಾಜಶೇಖರ್ ಅವರ ಮನೆಗೆ ಭೇಟಿ ನೀಡಿದಾಗ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರರನ್ನು ಕೊಲೆ ಮಾಡಿದ್ದಾರೆ. ಅವರೇ ಗುಂಡು ಹಾರಿಸಿದ್ದರಿಂದ ಪ್ರಾಣ ಕಳಕೊಂಡಿದ್ದಾರೆ ಎಂದು

ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ಜಯಭೇರಿ, ಶಿವಸೇನೆಗೆ ಮುಖಭಂಗ

ಮುಂಬೈ: ಬೃಹನ್‌ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, 4 ದಶಕಗಳ ಆಡಳಿತಕ್ಕೆ ಕೊನೆಗೊಳ್ಳುವ ಮೂಲಕ ಶಿವಸೇನೆ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ಗುರುವಾರ ನಡೆದ ಬಿಎಂಸಿ ಚುನಾವಣೆಯಲ್ಲಿ ಸಮೀಕ್ಷೆ ವರದಿ ನಿಜವಾಗಿದ್ದು, ಬಿಜೆಪಿ ನೇತೃತ್ವದ ಮಹಾಯುತಿ

ಸತತ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ದರ ದಿಢೀರ್ ಕುಸಿತ!

ಸತತ ಐದು ದಿನಗಳಿಂದ ಏರಿಕೆ ಕಂಡು ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿರುವ ಚಿನ್ನ- ಬೆಳ್ಳಿ ದರ ಶುಕ್ರವಾರ ದಿಢೀರ್ ಕುಸಿತ ದಾಖಲಿಸಿದೆ. ಇದರಿಂದ ಗ್ರಾಹಕರು ನೆಮ್ಮದಿಯ ನಿಟ್ಟುಸಿರುಬಿಡುವಂತಾಗಿದೆ. ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 4,027 ರೂ. ಇಳಿಕೆ ಕಂಡಿದೆ. ಇದರಿಂದ ಕೆಜಿಗೆ ಬೆಳ್ಳಿ

ಸುತ್ತೂರು ಜಾತ್ರೆಯ ಸಾಮೂಹಿಕ ವಿವಾಹ: ದಾಂಪತ್ಯಕ್ಕೆ ಕಾಲಿಟ್ಟ 135 ಜೋಡಿ

ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದ 2ನೇ ದಿನ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 135 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಿಧ ಮಠಾಧಿಪತಿಗಳ ದಿವ್ಯ ಸಾನ್ನಿಧ್ಯದಲ್ಲಿ ಶುಕ್ರವಾರ ಸಾಮೂಹಿಕ ವಿವಾಹ ನಡೆಯಿತು. 135 ಜೋಡಿಗಳ ಪೈಕಿ 84 ಪರಿಶಿಷ್ಟ ಜಾತಿ, 15

ರಾಜ್ಯಕ್ಕೆ ವಾಪಸ್ ಆಗ್ತಾರಾ ಎಚ್‌ಡಿಕೆ

ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆ, ಜಿಲ್ಲೆ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳಿಗೆ ಗೆಲುವು ಸಾಧಿಸಿಕೊಡುವ ನಿಟ್ಟಿನಲ್ಲಿ ನೀಲ ನಕ್ಷೆಯನ್ನು ಸಿದ್ದಪಡಿಸಿ ಕ್ರಿಯಾ ಯೋಜನೆಯನ್ನೂ ತಯಾರಿಸಿದೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ಪಾಳೆಯದಲ್ಲಿ ಈ ದಿಶೆಯಲ್ಲಿ ನಿಶ್ಚಿತ

ಪ್ರಯಾಗರಾಜ್‌ ಮಾಘ ಮೇಳ: ಸಂಗಮದಲ್ಲಿ ಮಿಂದೆದ್ದ 30 ಲಕ್ಷ ಭಕ್ತರು

ಪ್ರಯಾಗರಾಜ್‌: ಮಕರ ಸಂಕ್ರಾಂತಿ ಅಂಗವಾಗಿ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ ಗುರುವಾರ ಗಂಗಾನದಿ ಹಾಗೂ ಸಂಗಮ ದಲ್ಲಿ 30 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಬುಧವಾರ ಮಧ್ಯರಾತ್ರಿಯಿಂದಲೇ ಭಕ್ತರ ಸ್ನಾನ ಆರಂಭವಾಗಿದ್ದು, ಬೆಳಗ್ಗೆ 8 ಗಂಟೆ ಹೊತ್ತಿಗೆ ಸುಮಾರು

ಇರಾನ್‌ ಬಿಕ್ಕಟ್ಟು: ಭದ್ರತಾ ಮಂಡಳಿ ಮಧ್ಯ ಪ್ರವೇಶಿಸಲಿ

ದೇಶಗಳ ಸಾರ್ವಭೌಮತೆ ಮತ್ತು ಶಾಂತಿಯನ್ನು ಕಾಪಾಡುವುದೇ ವಿಶ್ವಸಂಸ್ಥೆಯ ಮೂಲಮಂತ್ರವಾಗಿರುವಾಗ ಭದ್ರತಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಇನ್ನೂ ಯಾಕೆ ಇರಾನ್‌ ಬಿಕ್ಕಟ್ಟು ವಿಚಾರದಲ್ಲಿ ಎಚ್ಚೆತ್ತುಕೊಳ್ಳುತ್ತಿಲ್ಲ? ಇರಾನ್ ದೂರು ಸಲ್ಲಿಸುವ ಮುನ್ನವೇ ಸ್ವಪ್ರೇರಣೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಉಭಯ ದೇಶಗಳ ನಡುವಣ ತಲೆದೋರಿರುವ

ಜಿಬಿಎ ಮೊದಲ ಚುನಾವಣೆ ನೂರಕ್ಕೆ ನೂರು ದೋಷರಹಿತ ಮತ್ತು ಪಾರದರ್ಶಕವಾಗಲಿ

ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ವಾಸವಾಗಿರುವವರೆಲ್ಲರೂ ಇಲ್ಲಿನ ಮತದಾರರಲ್ಲ. ಚುನಾವಣಾ ಆಯೋಗವೀಗ ನೂರಕ್ಕೆ ನೂರರಷ್ಟು ದೋಷರಹಿತ ಮತ್ತು ಪಾರದರ್ಶಕ ಮತದಾರರಪಟ್ಟಿಯನ್ನು ಮೊದಲು ಸಿದ್ಧಪಡಿಸಬೇಕಿರುವ ತುರ್ತು ಅನಿವಾರ್ಯತೆ ಇದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಮುಂದಿನ ಜೂನ್ ತಿಂಗಳೊಳಗೆ ಚುನಾವಣೆ

ಭಾರತಕ್ಕೆ ಸಂಬಂಧಿಸಿದಂತೆ ಅಮೆರಿಕದ ಕಟುನೀತಿ ಬದಲಾಗಲಿ

ಜಾಗತಿಕ ಮಟ್ಟದಲ್ಲಿ ಭಾರತವೊಂದು ಬೃಹತ್ ಮಾರುಕಟ್ಟೆ ಎಂಬ ಕಟುಸತ್ಯವನ್ನು ಅಮೆರಿಕ ಒಪ್ಪುವುದಾದರೆ, ಡೊನಾಲ್ಡ್ ಟ್ರಂಪ್ ತಾಳಿರುವ ವ್ಯಾಪಾರಿಕ ಕಟು ತೀರ್ಮಾನಗಳನ್ನು ವಾಪಸ್ ಪಡೆಯುವುದು ಅನಿವಾರ್ಯವಾದೀತು. ಭಾರತದೊಂದಿಗೆ ಅಮೆರಿಕದ ವ್ಯಾಪಾರ ಹಾಗೂ ವಾಣಿಜ್ಯ ಸಂಬಂಧ ಕುರಿತು ಈ ದೇಶದ ರಾಯಭಾರಿ ಸರ್ಗಿಯೋ ಗೋರ್

ವಿಜಯ್ ಹಜಾರೆ ಟ್ರೋಫಿ: ಮುಂಬೈ ಸೋಲಿಸಿ ಸೆಮೀಸ್ ಪ್ರವೇಶಿಸಿದ ಕರ್ನಾಟಕ

ಬೆಂಗಳೂರು: ಆರಂಭಿಕ ದೇವದತ್ ಪಡಿಕ್ಕಲ್ ಮತ್ತು ಕರಣ್ ನಾಯರ್ ಅವರ ಅಜೇಯ ಅರ್ಧಶತಕಗಳ ನೆರವಿನಿಂದ ಕರ್ನಾಟಕ ತಂಡ 55 ರನ್ ಗಳಿಂದ ಮುಂಬೈ ತಂಡವನ್ನು ಸೋಲಿಸಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಮೊದಲ ಕ್ವಾರ್ಟರ್ ಫೈನಲ್