Menu

8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಅಸ್ತು

೮ನೇ ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ 8ನೇ ವೇತನ ಆಯೋಗ ರಚಿಸಲು ತೀರ್ಮಾನಿಸಲಾಯಿತು.

ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶ್ವಿನಿ ವೈಷ್ಣವ್, 2016ರಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗಿತ್ತು. 2026ರಲ್ಲಿ ಅದರ ಅವಧಿ ಅಂತ್ಯವಾಗಲಿದ್ದು, ಆಯೋಗದ ಅಧ್ಯಕ್ಷ ಹಾಗೂ ಇಬ್ಬರು ಸದಸ್ಯರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದರು.

ಕೇಂದ್ರ ಸರ್ಕಾರಿ ನೌಕರರಿಗೆ ಪ್ರಧಾನ ಮಂತ್ರಿಗಳು 8ನೇ ಕೇಂದ್ರ ವೇತನ ಆಯೋಗವನ್ನು ಅನುಮೋದಿಸಿದ್ದಾರೆ. ಆಯೋಗದ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ಶೀಘ್ರದಲ್ಲೇ ನೇಮಿಸಲಾಗುವುದು. ಪ್ರಸ್ತುತ 49 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಸುಮಾರು 65 ಲಕ್ಷ ಪಿಂಚಣಿದಾರರಿದ್ದಾರೆ.

Related Posts

Leave a Reply

Your email address will not be published. Required fields are marked *