ರಾಜ್ಯ ಸರ್ಕಾರ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಹಮ್ಮಿಕೊಂಡಿರುವ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ ೧೯ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿವೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.