Wednesday, February 18, 2026
Menu

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌: ಸೂರಜ್‌ ರೇವಣ್ಣ ಅರ್ಜಿ ವಜಾಗೊಳಿಸಿದ ಕೋರ್ಟ್‌

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿ ಜೆಡಿಎಸ್ ಎಂಎಲ್​​​ಸಿ ಸೂರಜ್ ರೇವಣ್ಣ ಸಲ್ಲಿಸಿದ್ದ ಮರುಪರಿಶೀಲನಾ‌ ಅರ್ಜಿಯನ್ನು ಕೋರ್ಟ್​ ವಜಾಗೊಳಿಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಅರ್ಜಿ ಸಲ್ಲಿಸಿದ್ದರು, ಆ ಅರ್ಜಿಯನ್ನು ವಜಾ ಮಾಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

ಜೆಡಿಎಸ್‌ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಡಾ.ಸೂರಜ್‌ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದರಿಂದ ಒಂದು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದರು.

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದಾಖಲಿಸಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೂನ್ 23 ರಂದು ಸೂರಜ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು.

ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬವರು ಸಂತ್ರಸ್ತನ ವಿರುದ್ಧ ಪ್ರತಿ ದೂರು ನೀಡಿದ್ದರು. ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಸಿ ಐದು ಕೋಟಿ ರೂ. ನೀಡದಿದ್ದರೆ ಕೇಸ್ ದಾಖಲಿಸುತ್ತೇನೆ ಎಂದು ಬ್ಲ್ಯಾಕ್​​ಮೇಲ್ ಮಾಡಿದ್ದಾಗಿ ಶಿವಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದರು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು.

Related Posts

Leave a Reply

Your email address will not be published. Required fields are marked *