Menu

ಭಾರತಕ್ಕೆ ಇಂದು ಬಂದಿಳಿಯಲಿದೆ 119 ವಲಸಿಗರನ್ನು ಹೊತ್ತ ಅಮೆರಿಕದ 2ನೇ ವಿಮಾನ!

immigratnts

ಪ್ರಧಾನಿ ನರೇಂದ್ರ ಮೋದಿ ಜೊತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಬೆನ್ನಲ್ಲಿಯೇ 119 ಅಕ್ರಮ ವಲಸಿಗರನ್ನು ಹೊತ್ತ ಎರಡು ವಿಮಾನಗಳು ಇಂದು ಪಂಜಾಬ್ ನಲ್ಲಿ ಬಂದಿಳಿಯಲಿವೆ.

ಈಗಾಗಲೇ ಮೊದಲ ಹಂತದಲ್ಲಿ 1 ವಿಮಾನದಲ್ಲಿ ಅಮೆರಿಕದಲ್ಲಿರುವ 104 ಅಕ್ರಮ ಭಾರತೀಯ ವಲಸಿಗರನ್ನು ಭಾರತಕ್ಕೆ ವಾಪಸ್ ತಂದು ಬಿಡಲಾಗಿತ್ತು. ಇದೀಗ ಎರಡನೇ ಹಂತದ ಕಾರ್ಯಾಚರಣೆಯಲ್ಲಿ 2 ವಿಮಾನಗಳಲ್ಲಿ ಕರೆತರಲಾಗುತ್ತಿದೆ ಎಂದು ಹೇಳಲಾಗಿದೆ.

ಅಮೆರಿಕದಲ್ಲಿ ಅಂಕಿ-ಅಂಶಗಳ ಪ್ರಕಾರ 487 ಅಕ್ರಮ ಭಾರತೀಯ ವಲಸಿಗರನ್ನು ಗುರುತಿಸಲಾಗಿದ್ದು, ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕಳುಹಿಸಿಕೊಡಲಾಗುವುದು ಎಂದು ಅಮೆರಿಕ ಭಾರತಕ್ಕೆ ಮಾಹಿತಿ ನೀಡಿತ್ತು.

ಎರಡನೇ ವಿಮಾನ ಫೆಬ್ರವರಿ 15 ಶನಿವಾರ ಪಂಜಾಬ್ ನ ಅಮೃತಸರದಲ್ಲಿರುವ ಶ್ರೀ ಗುರು ರಾಮ್ ದಾಸ್ ಜೀ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ನಿರೀಕ್ಷೆಯಿದೆ. ಅದಾದ ಕೆಲವು ದಿನಗಳ ನಂತರ ಮೂರನೇ ವಿಮಾನವು ಭಾರತಕ್ಕೆ ಆಗಮಿಸುವ ನಿರೀಕ್ಷೆಯಿದೆ.

ಡೊನಾಲ್ಡ್ ಟ್ರಂಪ್ ಸರ್ಕಾರ ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಮಹಾರಾಷ್ಟ್ರ, ಗುಜರಾತ್ ಮತ್ತು ಚಂಡೀಗಢಕ್ಕೆ ಸೇರಿದ 25 ಮಹಿಳೆಯರು ಮತ್ತು 12 ಅಪ್ರಾಪ್ತ ವಯಸ್ಕರು ಸೇರಿದಂತೆ 104 ದಾಖಲೆರಹಿತ ಭಾರತೀಯರನ್ನು ಗಡೀಪಾರು ಮಾಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.

Related Posts

Leave a Reply

Your email address will not be published. Required fields are marked *