ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಅವರನ್ನು ರಕ್ಷಿಸಲು ಚುನಾವಣಾ ಆಯೋಗದ ಬಗ್ಗೆ, ಚುನಾವಣಾ ಪ್ರಕ್ರಿಯೆ ಬಗ್ಗೆ, ಮತಯಂತ್ರಗಳ ಬಗ್ಗೆ ಇಲ್ಲಸಲ್ಲದ ಅನುಮಾನ ಬಿತ್ತಿ ಊಹಾಪೋಹ ಸೃಷ್ಟಿ ಮಾಡುವ ಪ್ರಯತ್ನ ಮಾಡುತ್ತಲೇ ಬಂದಿದೆ. ಭಾರತದ ಪ್ರಜ್ಞಾವಂತ ಮತದಾರರು ಈ ಹತಾಶ ಪ್ರಯತ್ನವನ್ನು ತಿರಸ್ಕಾರ ಮಾಡುತ್ತಲೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸ್ಥಳೀಯ ಚುನಾವಣೆಗಳಲ್ಲಿ ಮತ ಯಂತ್ರ ಬದಲಾಗಿ ಮತ ಪತ್ರ ಬಳಕೆಗೆ ನಿರ್ಧರಿಸಿರುವ ರಾಜ್ಯ ಸರ್ಕಾರದ ಸಂಪುಟದ ತೀರ್ಮಾನ ತೀರಾ ಕೆಳ ಮಟ್ಟದಾಗಿದ್ದು, ಒಬ್ಬ ವ್ಯಕ್ತಿ, ಒಂದು ಕುಟುಂಬದ ರಕ್ಷಣೆಗಾಗಿ ದೇಶದ ಪ್ರಜಾಪ್ರಭುವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಪಾಪದ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿದೆ ಎಂದು ಕಿಡಿ ಕಾರಿದ್ದಾರೆ.
🗳️ Balllot Paper= Bogus Voting
ಬ್ಯಾಲೆಟ್ ಪೇಪರ್ = ಬೋಗಸ್ ವೋಟಿಂಗ್🗳️Ballot Paper = Booth Capturing
ಬ್ಯಾಲೆಟ್ ಪೇಪರ್ = ಬೂತ್ ಕ್ಯಾಪ್ಚರಿಂಗ್ಹ್ಯಾಟ್ರಿಕ್ ಝೀರೋ @RahulGandhi
ಅವರ ನೇತೃತ್ವದಲ್ಲಿ ಸಂಪೂರ್ಣ ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಅವರನ್ನು ರಕ್ಷಿಸಲು, ಚುನಾವಣಾ ಆಯೋಗದ ಬಗ್ಗೆ, ಚುನಾವಣಾ… pic.twitter.com/EQivywBZ3w— R. Ashoka (@RAshokaBJP) September 7, 2025
2004 ರಲ್ಲಿ ಯುಪಿಎ-1 ಸರ್ಕಾರ ಬಂದಿದ್ದು ಇದೇ ಮತಯಂತ್ರಗಳಿಂದ, 2009 ರಲ್ಲಿ ಯುಪಿಯ-2 ಸರ್ಕಾರ ಬಂದಿದ್ದು ಇದೇ ಮತಯಂತ್ರಗಳಿಂದ, 2013 ರಲ್ಲಿ ತಾವು ಮೊದಲ ಬಾರಿ ಮುಖ್ಯಮಂತ್ರಿಗಳಾಗಿದ್ದು ಇದೇ ಮತಯಂತ್ರಗಳಿಂದ, 2023ರಲ್ಲಿ ತಾವು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿರುವುದು ಇದೇ ಮತಯಂತ್ರಗಳಿಂದ, ಈಗ ಅದೇ ಮತಯಂತ್ರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮತ್ತೊಮ್ಮೆ ಓಬೀರಾಯನ ಕಾಲದ ಮಾತಪೆಟ್ಟಿಗೆಗೆ ಮರಳುವ ನಿರ್ಧಾರ ಮಾಡಿದ್ದೀರಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಯವರನ್ನು ಪ್ರಶ್ನಿಸಿದ್ದಾರೆ.
ಯಾರನ್ನು ಮೆಚ್ಚಿಸಲು ಈ ನಿರ್ಧಾರ ಮಾಡಿದ್ದೀರಿ, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯುತ್ತೇನೆ ಎನ್ನುವ ಸಂದೇಶ ನೀಡುವ ಮೂಲಕ ನಿಮ್ಮ ಘನತೆ, ವ್ಯಕ್ತಿತ್ವ ತಾವೇ ಯಾಕೆ ಕಡಿಮೆ ಮಾಡಿಕೊಳ್ಳುತ್ತೀರಿ, ಕನ್ನಡಿಗರ ಮುಂದೆ ಯಾಕೆ ಸಣ್ಣವರಾಗುತ್ತೀರಿ ಎಂದಿದ್ದಾರೆ.
ಗೆದ್ದಾಗ ಬೀಗುವುದು, ಸೋತಾಗ ವ್ಯವಸ್ಥೆಯನ್ನ ದೂಷಿಸುವುದು ಪ್ರಜಾಪ್ರಭುತ್ವಕ್ಕೆ, ಮತದಾರರಿಗೆ, ಜನಾದೇಶಕ್ಕೆ, ಇವೆಲ್ಲವನ್ನೂ ಕೊಟ್ಟ ಸಂವಿಧಾನಕ್ಕೆ ಮಾಡುವ ಅಪಮಾನ ಅಲ್ಲವೇ, ತಾವು ಸಂವಿಧಾನವಾದಿ, ಪ್ರಪಪ್ರಭುವವಾದಿ ಎಂದು ಇತಿಹಾಸದಲ್ಲಿ ಗುರುತಿಸಿಕೊಳ್ಳಲು ಬಯಸುತ್ತೀರೋ ಅಥವಾ ಹೈಕಮಾಂಡ್ ಗುಲಾಮಗಿರಿಗಾಗಿ, ಅಧಿಕಾರಕ್ಕಾಗಿ ಆತ್ಮಸಾಕ್ಷಿಯನ್ನೇ ಮಾರಿಕೊಂಡ ಆತ್ಮವಂಚಕ ಎಂಬ ಹಣೆಪಟ್ಟಿ ಗಳಿಸಲು ಬಯಸುತ್ತೀರೋ ಎಂದು ಕೇಳಿದ್ದಾರೆ.
ಬೇರೆ ವಿಷಯಗಳಲ್ಲಿ ರಾಜಕೀಯ ಕೆಸರೆರಚಾಟ ಏನೇ ಇರಲಿ, ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಆಧಾರ ಸ್ತಂಭವಾಗಿರುವ ಚುನಾವಣಾ ಪ್ರಕ್ರಿಯೆ ಬಗ್ಗೆಯೇ ಸಂದೇಹ ಮೂಡಿಸುವ ಪಾಪದ ಕೆಲಸ ಮಾಡಬೇಡಿ. ಇದು ನಿಮಗೆ ಖಂಡಿತ ಶೋಭೆ ತರುವುದಿಲ್ಲ ಎಂದಿದ್ದಾರೆ.