Menu

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಖಾದರ್ ರಾಜೀನಾಮೆ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಅವರು ಸಚಿವರಾಗುತ್ತಿರುವ ಹಿನ್ನೆಲೆ ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್​ಗೆ ಖಾದರ್​​ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ಗೆ ಖಾದರ್​​ ಧನ್ಯವಾದ ತಿಳಿಸಿದ್ದಾರೆ. ಲೋಕಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿರುವ ಖಾದರ್​​, ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಒಳಿತೆಂಬ ಬಯಕೆ ಇದೆ. ನಾಯಕರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿಭಾಯಿಸಲು ಸಿದ್ಧ. ಯಾವ ಬಾಲ್ ಬಂದರೂ ಬ್ಯಾಟಿಂಗ್ ಮಾಡುವುದಾಗಿ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *