Menu

ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ (88) ವ್ಯಾಟಿಕನ್ ನಗರದಲ್ಲಿ ನಿಧನರಾದರು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ನ್ಯುಮೋನಿಯಾ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.

ಪೋಪ್ ಫ್ರಾನ್ಸಿಸ್ ನಿಧನದ ಸುದ್ದಿ ತಿಳಿದು ಪ್ರಪಂಚದಾದ್ಯಂತ ಕೋಟ್ಯಂತರ ಕ್ಯಾಥೋಲಿಕರು ಶೋಕ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯದ ಕಾರಣ ಪೋಪ್ ಫ್ರಾನ್ಸಿಸ್ ಅವರಿಗೆಕಳೆದ ವಾರ ಸೇಂಟ್ ಪೀಟರ್ಸ್ ಚೌಕ್​​ನಲ್ಲಿ ಕ್ಯಾಥೋಲಿಕ್ ಚರ್ಚ್‌ನ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಪೋಪ್ ಫ್ರಾನ್ಸಿಸ್ ಅವರ ನಿಧನ ವಾರ್ತೆಯನ್ನು ವ್ಯಾಟಿಕನ್‌ನ ಕ್ಯಾಮರ್ಲೆಂಗೊ ಕಾರ್ಡಿನಲ್ ಕೆವಿನ್ ಫಾರೆಲ್ ಘೋಷಿಸಿದರು. ಕ್ಯಾಮರ್ಲೆಂಗೊ ಕಾರ್ಡಿನಲ್ ವ್ಯಾಟೆಕಿನ್ ನಗರದಲ್ಲಿ ಖಜಾನೆ ಮತ್ತು ಆಡಳಿತಾತ್ಮಕ ಕೆಲಸಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದೆ.

ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸುವುದಾಗಿ ಸಾಮಾಜಿಕ ಖಾತೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *