ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದು, 20 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ವಿಡಿ ಸತೀಶನ್ ಹಾಗೂ 20 ಮಂದಿ ಸಚಿವರಿಗೆ ರಾಜ್ಯಪಾಲ ಆರ್.ವಿ. ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣ ವಚನ ಬೋಧಿಸಿದರು.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರೇವಂತ್ ರೆಡ್ಡಿ, ಕೆಸಿ.ವೇಣುಗೋಪಾಲ್, ರಾಜೀವ್ ಚಂದ್ರಶೇಖರ್, ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್ನಿಂದ 11 ಮಂದಿ, ಮುಸ್ಲಿಂ ಲೀಗ್ನ ಐವರು ಹಾಗೂ ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು ಬೇಬಿ ಜಾನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ), ಅನೂಪ್ ಜಾಕೋಬ್ (ಕೇರಳ ಕಾಂಗ್ರೆಸ್-ಜಾಕೋಬ್), ಮತ್ತು ಸಿಪಿ ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ) ಸಚಿವರಾಗಿ ಪ್ರಮಾಣವಚನ ಸ್ವೀರಿಸಿದ್ದಾರೆ.


