Thursday, January 30, 2025
Menu

ಹೆಬ್ಬಾಳ್ಕರ್‌ಗೆ ಅವಾಚ್ಯ ನಿಂದನೆ: ಸಿಐಡಿ ವಿಚಾರಣೆಗೆ ಸಿಟಿ ರವಿ ಗೈರು

ಬೆಳಗಾವಿಯ ಸುವರ್ಣ ಸೌಧದಲ್ಲಿ ಇತ್ತೀಚೆಗೆ ನಡೆದ ಅಧಿವೇಶನದ ವೇಳೆ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗುರುವಾರ ಬೆಳಿಗ್ಗೆ ೧೧ ಗಂಟೆಗೆ  ಹಾಜರಾಗುವಂತೆ ಸಿಐಡಿ ನೋಟಿಸ್‌ ನೀಡಿದ್ದರೂ ಅವರು ಹಾಜರಾಗಿಲ್ಲ.

ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೆಟ್ಟ ಪದ ಬಳಸಿದರೆಂದು ಸುವರ್ಣ ಸೌಧಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ನುಗ್ಗಿ ದಾಂಧಲೆ ಮಾಡಿದ್ದರು. ಸಿಟಿ ರವಿ ಬಂಧನದ ಬಳಿಕ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇಡೀ ರಾತ್ರಿ  ಪೊಲೀಸರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದೊಯ್ಯುವ ಮೂಲಕ ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ, ನನ್ನ ಹತ್ಯೆಗೆ ಪೊಲೀಸರು ಸಂಚು ನಡೆಸಿದ್ದರು ಎಂದು ಸಿಟಿ ರವಿ ಆರೋಪಿಸಿದ್ದರು.

ಪ್ರಕರಣದ ವಿವರಣೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದಿದ್ದರು.

Related Posts

Leave a Reply

Your email address will not be published. Required fields are marked *