Thursday, February 26, 2026
Menu

ಲಂಚ ಸ್ವೀಕಾರ: ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೆಗಳೂರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.  ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಸಾಪುರ ಗ್ರಾಮದ ಕೇಸರಳ್ಳಿ ಎಂಬವರ ಖಾತೆ ಬದಲಾವಣೆಗಾಗಿ ಗ್ರಾಮ ಲೆಕ್ಕಿಗ ಫಕ್ಕೀರೇಶ ಬಾರ್ಕಿ ಅವರು ರೂ.65,000 ಲಂಚ ಬೇಡಿಕೆ ಇಟ್ಟಿದ್ದರೆಂದು ದೂರಲಾಗಿದೆ.  ಮೂವತ್ತು ಸಾವಿರ ರೂ. ಈ ಹಿಂದೆಯೇ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.  ಸಂಬಂಧಪಟ್ಟವರು ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ  ನೆಗಳೂರದಲ್ಲಿನ ಕಚೇರಿಯಲ್ಲಿ ರೂ.8500 ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಗ್ರಾಮ ಲೆಕ್ಕಿಗ ಫಕ್ಕೀರಪ್ಪ ಬಾರ್ಕಿ ಅವರು ಲಂಚ ಹಣವನ್ನು ಕೈಯಲ್ಲೇ ಸ್ವೀಕರಿಸುತ್ತಿದ್ದಾಗಲೇ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸ್ಥಳದಲ್ಲೇ ಹಣವನ್ನು ವಶಪಡಿಸಿಕೊಂಡ ಅಧಿಕಾರಿಗಳು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿ ದ್ದಾರೆ. ಈ ಘಟನೆ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತದ ಕಟ್ಟುನಿಟ್ಟಿನ ಕ್ರಮಕ್ಕೆ ಮತ್ತೊಂದು ಉದಾಹರಣೆಯಾಗಿದೆ.

Related Posts

Leave a Reply

Your email address will not be published. Required fields are marked *