ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆ ರಾಜ್ಯ ಹೊತ್ತಿ ಉರಿಯುತ್ತಿದೆ. ಘರ್ಷಣೆಯಲ್ಲಿ ಈವರೆಗೆ ಒಟ್ಟು ಮೂವರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂಸಾಚಾರ ಮುರ್ಷಿದಾಬಾದ್ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ, ಧುಲಿಯನ್, ಸಂಸರ್‌ಗಂಜ್ ಮತ್ತು ಜಂಗಿಪುರ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
ಮುರ್ಷಿದಾಬಾದ್‌ನಲ್ಲಿ 300 ಬಿಎಸ್‌ಎಫ್ ಸಿಬ್ಬಂದಿಯಲ್ಲದೆ 5 ಹೆಚ್ಚುವರಿ ತುಕಡಿಗಳನ್ನು ನಿಯೋಜಿಸಲಾಗಿದೆ. ಮುರ್ಷಿದಾಬಾದ್, ಮಾಲ್ಡಾ, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಲಾಗಿದೆ, ರಸ್ತೆಗಳನ್ನು ನಿರ್ಬಂಧಿಸ ಲಾಗಿದೆ.
ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದ್ದು, ಮತ್ತೊಂದೆಡೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಿ ದ್ದಾರೆ. ಕೆಲವು ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯ ತ್ನಿಸುತ್ತಿವೆ ಎಂದು ಕಿಡಿ ಕಾರಿದ್ದಾರೆ.