ಕೇಂದ್ರ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಮಂಡಿಸುವ ಸಾಧ್ಯತೆ ಇದೆ.
ಕೇಂದ್ರ ಸಂಸದೀಯ ಸಮಿತಿ ತಿದ್ದುಪಡಿಗಳಲ್ಲಿ ಪ್ರತಿಪಕ್ಷ ಸದಸ್ಯರ ಸಲಹೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಾಪಸ್ ಕಳುಹಿಸಲಾಗಿತ್ತು. ಇದೀಗ ಪ್ರತಿಪಕ್ಷ ಸದಸ್ಯರ ಸಲಹೆಗಳನ್ನು ಪರಿಗಣಿಸಿ ಲೋಕಸಭೆಯಲ್ಲಿ ಏಪ್ರಿಲ್ 2ರಂದು ಮರು ಮಂಡಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಏಪ್ರಿಲ್ 4ರಂದು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಎರಡು ದಿನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಪಾಸ್ ಆಗಬೇಕಿದ್ದು, ಈ ಹಿನ್ನೆಲೆಯಲ್ಲಿ ಏ.2ರಂದು ಮಂಡನೆಯಾಗುವ ಸಾಧ್ಯತೆ ಇದೆ.
ಮುಸ್ಲಿಮ್ ಸಮುದಾಯದ ಮುಖಂಡರು ಹಾಗೂ ಸಂಘಟನೆಗಳು ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದು, ದೇಶದ ಹಲವೆಡೆ ಕೈಗೆ ಕಪ್ಪುಪಟ್ಟಿ ಧರಿಸಿ ಈದ್ ದಿನ ನಮಾಜ್ ಸಲ್ಲಿಸಿದ್ದಾರೆ.