ಅಮೆರಿಕದ ನೆಲೆಗಳು ಮತ್ತು ಮಧ್ಯಪ್ರಾಚ್ಯ ದೇಶಗಳ ಮೇಲೆ ನಡೆಯುತ್ತಿರುವ ದಾಳಿ ಕೊನೆಯಾಗಬೇಕಾದರೆ ನಮ್ಮ ಮೂರು ಷರತ್ತನ್ನುಗಳನ್ನು ಒಪ್ಪಿಕೊಳ್ಳಬೇಕೆಂದು ಇರಾನ್ ಅಮೆರಿಕಕ್ಕೆ ಖಡಕ್ ಸಂದೇಶ ನೀಡಿದೆ. ಇಸ್ರೇಲ್-ಇರಾನ್ ಯುದ್ಧದಲ್ಲಿ ಅಮೆರಿಕ ಕಾರ್ಯಾಚರಣೆಯ ಬಳಿಕ ಇರಾನ್ ಪ್ರತೀಕಾರ ದಾಳಿಗಳನ್ನು ಮುಂದುವರಿಸಿದ್ದರಿಂದ ಮಧ್ಯಪ್ರಾಚ್ಯ ದೇಶಗಳು ಹೊತ್ತಿ ಉರಿಯುತ್ತಿವೆ.
ಇರಾನ್ ಶರಣಾದರೆ ಯುದ್ಧ ಕೊನೆಗೊಳಿಸುವುದಾಗಿ ಹೇಳಿಕೊಳ್ಳುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಪ್ರತಿಕ್ರಿಯಿಸಿ ಇರಾನ್, ಯುದ್ಧ ನಿಲ್ಲಿಸುವುದು ಇರಾನ್ನ ನಿರ್ಧಾರ, ಅಮೆರಿಕದ್ದಲ್ಲ ಎಂದು ಬಿಸಿ ಮುಟ್ಟಿಸಿತ್ತು. ಈಗ ಈ ಯುದ್ಧದಿಂದ ಹೈರಾಣಾಗಿರುವ ಟ್ರಂಪ್ ಯುದ್ಧ ಅಂತ್ಯಗೊಳಿಸುವ ಮಾತುಗಳನ್ನು ಆಡುತ್ತಿದ್ದಾರೆ.
ಅಮೆರಿಕದ ನೆಲೆಗಳು ಮತ್ತು ಮಧ್ಯಪ್ರಾಚ್ಯ ದೇಶಗಳ ಮೇಲೆ ನಡೆಯುತ್ತಿರುವ ದಾಳಿ ಕೊನೆಯಾಗಬೇಕಾದರೆ ನಮ್ಮ ಮೂರು ಷರತ್ತನ್ನುಗಳನ್ನು ಒಪ್ಪಿಕೊಳ್ಳಬೇಕೆಂದು ಇರಾನ್ ಅಮೆರಿಕಕ್ಕೆ ಖಡಕ್ ಸಂದೇಶ ನೀಡಿದೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್, ಇರಾನ್ನ ಕಾನೂನುಬದ್ಧ ಹಕ್ಕುಗಳನ್ನು ಗುರುತಿಸಬೇಕು. ಯುದ್ಧ ಹಾನಿಗಳಿಗೆ ಪರಿಹಾರ ನೀಡಬೇಕು. ಭವಿಷ್ಯದಲ್ಲಿ ಆಕ್ರಮಣ ಮಾಡುವುದಿಲ್ಲ ಎಂದು ದೃಢವಾದ ಅಂತರರಾಷ್ಟ್ರೀಯ ಖಾತರಿ ನೀಡಬೇಕು ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಷ್ಯಾ ಮತ್ತು ಪಾಕಿಸ್ತಾನದ ನಾಯಕರ ಜೊತೆ ಮಾತನಾಡುವ ವೇಳೆ ನಾನು ಈ ವಿಚಾರಗಳ ಬಗ್ಗೆ ಮಾತನಾಡಿದ್ದೇನೆ. ಈ ಪ್ರದೇಶದಲ್ಲಿ ಶಾಂತಿಗೆ ಇರಾನ್ನ ಬದ್ಧತೆಯನ್ನು ಪುನರುಚ್ಚರಿಸಿದ್ದೇನೆ. ಜಿಯೋನಿಸ್ಟ್ ಆಡಳಿತ ಮತ್ತು ಅಮೆರಿಕ ಹೊತ್ತಿಸಿದ ಈ ಯುದ್ಧವನ್ನು ಕೊನೆಗೊಳಿಸಲು ಇರುವ ಏಕೈಕ ಮಾರ್ಗ ಇದು ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ಡೊನಾಲ್ಡ್ ಟ್ರಂಪ್ ಇರಾನ್ ಬೇಷರತ್ತಾಗಿ ಶರಣಾಗಬೇಕು ಎಂದು ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಗೆ ಪ್ರತಿಕ್ರಿಯಿಸಿದ ಮಸೌದ್ ಪೆಜೆಶ್ಕಿಯಾನ್ ಅದು ಅಮೆರಿಕವನ್ನು ಸಮಾಧಿಗೆ ಕೊಂಡೊಯ್ಯಬೇಕಾದ ಕನಸು ಎಂದು ತಿರುಗೇಟು ನೀಡಿದ್ದರು.
ಹರ್ಮುಜ್ ಜಲಸಂಧಿಯಲ್ಲಿ ಯಾವುದೇ ನೇವಲ್ ಮೈನ್ಸ್ ಇದ್ದರೆ ಇರಾನ್ ತೆಗೆದು ಹಾಕಬೇಕು. ತೆಗೆಯದೆ ಇದ್ದರೆ ಹಿಂದೆಂದು ಕಾಣದ ರೀತಿ ಮಿಲಿಟರಿ ದಾಳಿ ನಡೆಯಲಿದೆ ಎಂದು ಬುಧವಾರ ಎಚ್ಚರಿಕೆ ನೀಡಿದ್ದಾರೆ. ಇರಾನ್ ಹರ್ಮುಜ್ ಜಲಸಂಧಿಯಲ್ಲಿ ಹಡಗುಗಳು ಸಂಚರಿಸದಂತೆ ಸಮುದ್ರದ ಒಳಗಡೆ ಸ್ಫೋಟಕ ಇರಿಸಿರುವ ವಿಚಾರ ತಿಳಿಯುತ್ತಿದ್ದಂತೆ ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್, ತೈಲ ಟ್ಯಾಂಕರ್ಗೆ ಅಮೆರಿಕ ನೌಕಾಪಡೆ ಬೆಂಗಾವಲು ನೀಡಿದೆ ಎಂಬ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಹರ್ಮುಜ್ ಜಲಸಂಧಿಯಲ್ಲಿ ಅಮೆರಿಕ ನೌಕಾಪಡೆಯ ಬೆಂಗಾವಲಿನಲ್ಲಿ ತೈಲ ಟ್ಯಾಂಕರ್ ಯಶಸ್ವಿಯಾಗಿ ಸಾಗಿದೆ ಎಂದು ಕ್ರಿಸ್ ರೈಟ್ ಪೋಸ್ಟ್ ಮಾಡಿದ್ದರು.ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಕ್ಯಾರೋಲಿನ್ ಲೆವಿಟ್ ಪ್ರತಿಕ್ರಿಯಿಸಿ, ಅಮೆರಿಕದ ಹಡಗು ಹಾರ್ಮುಜ್ ಜಲಸಂಧಿ ಮೂಲಕ ಹಾದು ಹೋಗಿಲ್ಲ. ಫೆ. 28 ರಂದು ದಾಳಿ ಪ್ರಾರಂಭವಾದಾಗಿನಿಂದ ಯುಎಸ್ ಯುದ್ಧನೌಕೆಗಳಿಂದ ಬೆಂಗಾವಲು ಪಡೆದ ಯಾವುದೇ ವಾಣಿಜ್ಯ ಹಡಗುಗಳು ಬಂದಿಲ್ಲ ಎಂದು ತಿಳಿಸಿದ್ದಾರೆ.


