ಉಗ್ರರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ಭಾರತ ತಕ್ಕ ಪಾಠ ಕಲಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ.
ಕದನ ವಿರಾಮ ಘೋಷಣೆ ಆದ ಬೆನ್ನಲ್ಲೇ ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಲ್ಲಿ ಪಾಕಿಸ್ತಾನದ ಎಲ್ಲಾ ದಾಳಿಗಳಿಗೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ ಎಂದರು.
ಕಳೆದ ಕೆಲವು ದಿನಗಳಿಂದ ಪಾಕಿಸ್ತಾನ ಯುದ್ಧದ ವಿಷಯದಲ್ಲಿ ಹಲವಾರು ಸುದ್ದಿಗಳನ್ನು ಹೇಳಿಕೊಂಡು ಬಂದಿದೆ. ಭಾರತದ ಮೇಲೆ ಅಪ್ರಚೋದಿತ ದಾಳಿ ನಡೆಸಿದ್ದಕ್ಕಾಗಿ ಸಾಕಷ್ಟು ನಷ್ಟ ಅನುಭವಿಸಿದೆ ಎಂದು ಅವರು ಹೇಳಿದರು.
ಪಾಕಿಸ್ತಾನದ ಭಾರತದ ದಾಳಿಯನ್ನು ವಿಫಲಗೊಳಿಸಿದೆ. ಭಾರತದ ವಾಯುನೆಲೆ ಹಾನಿ ಮಾಡಿದ್ದೇವೆ ಎಂಬುದು ಸೇರಿದಂತೆ ಹಲವು ಸುಳ್ಳು ಸುದ್ದಿಗಳನ್ನು ಹರಡಿತ್ತು. ಆದರೆ ಭಾರತಕ್ಕೆ ಈ ದಾಳಿಯಲ್ಲಿ ಯಾವುದೇ ನಷ್ಟ ಅಥವಾ ಹಾನಿ ಉಂಟಾಗಿಲ್ಲ ಎಂದು ಖುರೇಷಿ ಸ್ಪಷ್ಟಪಡಿಸಿದರು.