ನವದೆಹಲಿ: ಪಹಲ್ಗಾವ್ ನಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಉಗ್ರರನ್ನು ಹುಡುಕಿ ಹುಡುಕಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ಧಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೆಹಲ್ಗಾಮ್ ದಾಳಿಯನ್ನು ಪ್ರಸ್ತಾಪಿಸಿದ ಅವರು, ಉಗ್ರರ ದಾಳಿಗೆ ತಕ್ಕ ಉತ್ತರ ಮಾತ್ರವಲ್ಲ, ಪ್ರತಿಯೊಬ್ಬರೂ ನೆನೆಪಿಸಿಕೊಳ್ಳುವ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಮುಗ್ಧರನ್ನು ಕೊಂದು ಹೇಡಿ ಕೃತ್ಯವನ್ನು ವಿಜಯ ಎಂದು ಸಂಭ್ರಮಿಸುವುದಾದರೆ ಮೋದಿ ಸರ್ಕಾರದಲ್ಲಿ ಇದಕ್ಕೆ ಅವಕಾಶವೇ ಇಲ್ಲ. ಈ ರೀತಿಯ ದಾಳಿ ಮಾಡಿದವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.
ದೇಶದ ಪ್ರತಿಯೊಂದು ಮೂಲೆಯಿಂದಲೂ ಉಗ್ರರನ್ನು ಮಟ್ಟ ಹಾಕುವುದು ಸರ್ಕಾರದ ಮುಖ್ಯ ಜವಾಬ್ದಾರಿ ಆಗಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಉಗ್ರರನ್ನು ಸಂಪೂರ್ಣವಾಗಿ ಮಟ್ಟ ಹಾಕಲಾಗುವುದು ಎಂದು ಅಮಿತ್ ಶಾ ಸ್ಪಷ್ಟಪಡಿಸಿದರು.