Menu
12

ಕೇಂದ್ರ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧ ಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಉತ್ತರಿಸಿ, ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್ ದೇಶದ ಸುಲೇಮಾನ್ ಹ್ಯಾಂಕ್, ವಿಶ್ವಸಂಸ್ಥೆ ಜನರಲ್ ಬಾಡಿ ಅಧ್ಯಕ್ಷರು ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲೀಷ್ ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದು ಸದನದ ಗಮನದಲ್ಲಿದ್ದರೂ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. 2020 ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ. ನೀವೆಲ್ಲಾ ಇದನ್ನು ವಿರೋಧಿಸಿದ್ದೀರಿ ಎಂದು ಹೇಳಿದರು.

ರಾಜ್ಯಸರ್ಕಾರ ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ನೀವು ಮಾತ್ರವಲ್ಲ ದೇಶದ ಪ್ರಧಾನಿಗಳು ಕೂಡ ಟೀಕಿಸಿದ್ದರು. ಆದರೆ ನೀವೇ ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ. ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲವಾದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ ಎಂದು ಘೋಷಿಸಿದ್ದಾಗಿ ಟೀಕಿಸಿದರು.

Related Posts

Leave a Reply

Your email address will not be published. Required fields are marked *