Wednesday, August 19, 2026
Menu

ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ದಾವಣಗೆರೆಯಲ್ಲಿ ಗಂಡನ ಕೊಲೆಗೈದ ಪತ್ನಿ, ಪ್ರಿಯಕರ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಮಹಿಳೆಯೊಬ್ಬಳು ಪ್ರಿಯಕನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿ ಮೃತದೇಹವನ್ನು ತುಂಗಭದ್ರಾ ನದಿಗೆ ಎಸೆದಿರುವ ಘಟನೆ ದಾವಣಗೆರೆಯ ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪಾಮೇನಹಳ್ಳಿ ಗ್ರಾಮದ ರಘು (36) ಕೊಲೆಯಾದ ವ್ಯಕ್ತಿ. ಆತನಪತ್ನಿ ಶೃತಿ ಹಾಗೂ ಆಕೆಯ ಪ್ರಿಯಕರ ಉಬೇದುಲ್ಲಾ ಕೊಲೆ ಮಾಡಿದರವು. ರಘು ಹಾಗೂ ಶೃತಿ 12 ವರ್ಷಗಳ ಹಿಂದೆ ಮದುವೆಯಾಗಿದ್ದರು. ರಘು ಕುಡಿತದ ಚಟ ಹೊಂದಿದ್ದು, ಇಬ್ಬರ ನಡುವೆ ದಂಪತಿ ಮಧ್ಯೆ ಜಗಳವಾಗುತ್ತಿತ್ತು. ಕೆಲವು ವರ್ಷಗಳಿಂದ ಶೃತಿ ಹಾಗೂ ಉಬೇದುಲ್ಲಾ ನಡುವೆ ಅಕ್ರಮ ಸಂಬಂಧವಿತ್ತು ಎಂದು ಹೇಳಲಾಗಿದೆ.

ಅಕ್ರಮ ಸಂಬಂಧಕ್ಕೆ ಕಿರಿಕಿರಿ ಎಂದು ಪ್ರಿಯಕರ ಉಬೇದುಲ್ಲಾ ಜೊತೆ ಸೇರಿ ರಘುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಉಬೇದುಲ್ಲಾ ಹಾಗೂ ಸ್ನೇಹಿತ ಸುರೇಶ್ ಸೇರಿಕೊಂಡು ರಘುವಿನ ಮೃತದೇಹವನ್ನು ತುಂಗಭದ್ರಾ ನದಿಗೆ ಬಿಸಾಕಿದ್ದಾರೆ.

ರಘು ಕಾಣೆಯಾಗಿರುವುದಾಗಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ವೇಳೆ ಶೃತಿಯ ಸಹೋದರಿಯನ್ನು ಪೊಲೀಸರು ವಿಚಾರಣೆ ನಡೆಸಿದಾಗ ಅನುಮಾನವುಂಟಾಗಿ ವಿಚಾರಣೆ ತೀವ್ರಗೊಳಿಸಿದಾಗ ಸತ್ಯ ಬಹಿರಂಗವಾಗಿದೆ.
ಆರೋಪಿಗಳಾದ ಶೃತಿ, ಉಬೇದುಲ್ಲಾ ಹಾಗೂ ಸುರೇಶ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತದೇಹಕ್ಕಾಗಿ ತುಂಗಭದ್ರಾ ನದಿಯಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿಯಲು ನೀರು ಕೊಡದ್ದಕ್ಕೆ ಕೊಲೆ

ಕುಡಿಯಲು ನೀರು ಕೇಳಿದಾಗ ಕೊಡುವುದಿಲ್ಲ ಎಂದಿದ್ದಕ್ಕೆ ಲಾರಿ ಕ್ಲೀನರ್‌ನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್‌ಎಂಸಿ ಯಾರ್ಡ್‌ನ ಫ್ಯಾಕ್ಟರಿಯೊಂದರ ಬಳಿ ನಡೆದಿದೆ.

ಆಂಧ್ರದ ಬರ್ಕತ್ ಕೊಲೆಯಾದ ವ್ಯಕ್ತಿ, ಮಧುಗಿರಿಯ ಸೀನಪ್ಪ ಬಂಧಿತ ಆರೋಪಿ. ಬರ್ಕತ್ ಹಾಗೂ ಸೀನಪ್ಪ ಲಾರಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಊಟದ ಬಳಿಕ ಬರ್ಕತ್ ಬಳಿ ಸೀನಪ್ಪ ನೀರು ಕೇಳಿದ್ದಾನೆ.

ಬರ್ಕತ್ ನೀರು ಕೊಡುವುದಿಲ್ಲ ಎಂದು ಹೇಳಿದ್ದಕ್ಕೆ ಗಲಾಟೆ ಆಗಿದೆ. ಸೀನಪ್ಪ ಚಾಕುವಿನಿಂದ ಹಲ್ಲೆ ಮಾಡಿ ಬರ್ಕತ್‌ನ ಹತ್ಯೆ ಮಾಡಿ ಪರಾರಿ ಆಗಿದ್ದಾನೆ. ಆರ್‌ಎಂಸಿ ಯಾರ್ಡ್ ಪೊಲೀಸು ಆರೋಪಿ ಸೀನಪ್ಪನನ್ನು ಬಂಧಿಸಿದ್ದಾರೆ.

Related Posts

Leave a Reply

Your email address will not be published. Required fields are marked *