ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ಕುಡಿಯಲು ಹಣ ನೀಡುತ್ತಿಲ್ಲವೆಂದು ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಗಾಯತ್ರಿ ಕೊಲೆಯಾದ ಮಹಿಳೆ, ಪಾಪಣ್ಣ ಕೊಲೆಗೈದ ಪತಿ.
ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪಾಪಣ್ಣ ಸಾಲಗಾರನಾಗಿ ಕುಡಿತದ ಚಟಕ್ಕೆ ಒಳಗಾಗಿದ್ದಾನೆ. ಹಣಕ್ಕಾಗಿ ಹೆಂಡತಿ, ಮಕ್ಕಳನ್ನು ಪೀಡಿಸುತ್ತಿದ್ದ. ಜಮೀನು ಮಾರಿ ಹಣ ನೀಡುವಂತೆ ಹೆಂಡತಿಯನ್ನು ಒತ್ತಾಯಿಸುತ್ತಿದ್ದ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗುವಾಗ ಮಗ ತಡೆದು ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಆರೋಪಿ ಪಾಪಣ್ಣನನ್ನು ಬಂಧಿಸಿರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.