Menu

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಹೊಸ ಕಠಿಣ ಮಸೂದೆ ಮಂಡನೆ ಸಿದ್ಧತೆ?

ನೀಟ್‌ ಸೇರಿದಂತೆ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ಮತ್ತು ಶಿಕ್ಷೆ ಒದಗಿಸುವ ಹೊಸ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಹೊಸ ನಿಯಮಗಳು ಮತ್ತು ಕಠಿಣ ಕ್ರಮಗಳ ಕುರಿತು ಕೇಂದ್ರ ಸಚಿವರ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ ಎಂದು ತಿಳಿಸಿದರು. ಸೋಮವಾರದಿಂದ ಸಂಸತ್ತಿನ ಕಲಾಪಗಳು ಪ್ರಾರಂಭವಾಗುತ್ತಿದ್ದು, ಆದಷ್ಟು ಬೇಗ ಈ ಮಸೂದೆಮಂಡಿಸಿ ಅಂಗೀಕರಿಸಲು ಪ್ರಯತ್ನಿಸಲಾಗುವುದು. ಈ ಪ್ರಕರಣಗಳ ತನಿಖೆ ಮತ್ತು ವಿಚಾರಣೆಯನ್ನು ಶೀಘ್ರವಾಗಿ ಮುಗಿಸಲು ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ನಿಬಂಧನೆಗಳಿರಲಿವೆ ಎಂದು ಮಾಹಿತಿ ನೀಡಿದ್ದಾರೆ.

ಪರೀಕ್ಷಾ ಪ್ರಶ್ನೆಪತ್ರಿಕೆಸೋರಿಕೆ ಮತ್ತು ಅಕ್ರಮಗಳನ್ನು ತಡೆಯಲು ಇರುವ ಕಾನೂನುಗಳನ್ನು ಮತ್ತಷ್ಟು ಕಠಿಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರವು ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ 2024ಕ್ಕೆ ತಿದ್ದುಪಡಿ ತರಲು ಯೋಜಿಸಿದೆ. ಪ್ರಸ್ತುತ ಇರುವ ಕಾನೂನಿನಡಿ ವೈಯಕ್ತಿಕ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಮೂರರಿಂದ ಐದು ವರ್ಷ ಜೈಲು ಮತ್ತು 10 ಲಕ್ಷ ರೂ. ದಂಡ ವಿಧಿಸಲು ಅವಕಾಶವಿದೆ. ತಿದ್ದುಪಡಿಯ ಪ್ರಕಾರ ಶಿಕ್ಷೆಯ ಅವಧಿಯನ್ನು ಐದರಿಂದ 10 ವರ್ಷ, ದಂಡದ ಪ್ರಮಾಣವನ್ನು ಒಂದು ಕೋಟಿ ರೂ.ಗೆ ಏರಿಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *