ಇಸ್ಲಮಾಬಾದ್: ಸಿಂಧೂ ನದಿ ನೀರು ಪಾಕಿಸ್ತಾನಕ್ಕೆ ಹರಿಯಬೇಕು. ಇಲ್ಲವಾದಲ್ಲಿ ಭಾರತೀಯರ ರಕ್ತ ಹರಿಸುತ್ತೇವೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದ ಭುಟ್ಟೋ, ಸಿಂಧೂ ನಮ್ಮದು. ಅದು ನಮ್ಮದೇ ಆಗಿರುತ್ತದೆ ಎಂದು ನಾನು ಭಾರತಕ್ಕೆ ಹೇಳಲು ಬಯಸುತ್ತೇನೆ. ನಮ್ಮ ನೀರು ಅದರ ಮೂಲಕ ಹರಿಯುತ್ತದೆ. ಇಲ್ಲದಿದ್ದರೆ ಅವರ ರಕ್ತ ಹರಿಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಭುಟ್ಟೋ ಮಾತನಾಡಿದ್ದಾರೆ.
ಪಹಲ್ಗಾಮ್ ದಾಳಿಗೆ ಪಾಕಿಸ್ತಾನವನ್ನು ಬಲಿಪಶು ಮಾಡಲಾಗುತ್ತಿದೆ. ಆ ಮೂಲಕ ಭಾರತ ತನ್ನ ಆಂತರಿಕ ಭದ್ರತಾ ಲೋಪಗಳಿಂದ ಗಮನವನ್ನು ಬೇರೆಡೆ ಸೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಭಾರತವು ಇಸ್ಲಾಮಾಬಾದ್ ಜೊತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ನಿಲ್ಲಿಸಿದೆ. ಪಾಕಿಸ್ತಾನಿ ಮಿಲಿಟರಿ ಅಟ್ಯಾಚ್‌ಗಳನ್ನು ಹೊರಹಾಕುವುದು, ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು, ಅಟ್ಟಾರಿ ಭೂ ಸಾರಿಗೆ ಪೋಸ್ಟ್ ಅನ್ನು ಮುಚ್ಚುವುದು ಸೇರಿದಂತೆ ಹಲವಾರು ರಾಜತಾಂತ್ರಿಕ ಮತ್ತು ಆರ್ಥಿಕ ಕ್ರಮಗಳನ್ನು ಕೈಗೊಂಡಿದೆ.