ದೇವನಹಳ್ಳಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ನಾಲ್ಕು ಕೆಜಿ ಗಾಂಜಾದೊಂದಿಗೆ ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ.
ಬ್ಯಾಂಕಾಕ್ ನಿಂದ ಬರುತ್ತಿದ್ದ ಮಹಿಳೆ ಬಳಿ ನಾಲ್ಕು ಕೆಜಿ ಹೈಡ್ರೋ ಗಾಂಜಾ ಪತ್ತೆಯಾಗಿದೆ. ಹೈಡ್ರೋ ಗಾಂಜಾ ಕಳ್ಳ ಸಾಗಣೆ ಮಾಡ್ತಿರುವ ಖಚಿತ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿತ್ತು.
ವೈಮಾನಿಕ ಗುಪ್ತಚರ ದಳ ಮತ್ತು ಕಸ್ಟಮ್ಸ್ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯ ಲಗೇಜ್ ಬ್ಯಾಗ್ ಪರಿಶೀಲಿಸಿದಾಗ ಕಳ್ಳ ಸಾಗಣೆ ದೃಢಪಟ್ಟಿದೆ. ವಶಪಡಿಸಲಾದ 4 ಕೆಜಿ ಹೈಡ್ರೋ ಗಾಂಜಾ ಮೌಲ್ಯ 4 ಕೋಟಿ ಎಂದು ಅಂದಾಜಿಸಲಾಗಿದೆ.
ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ. ಆರೋಪಿ ವಿರುದ್ಧ ಮಾದಕ ವಸ್ತುಗಳ ನಿಯಂತ್ರಣಾ ಕಾಯ್ದೆ (ಎನ್‌ಡಿಪಿಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.