ಬೆಳಗಾವಿ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಮೆಸ್‌ವೊಂದರಲ್ಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ (45) ಕೊಲೆಯಾದ ಮಹಿಳೆ. ಮಹಿಳೆ ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ
ಮೆಸ್ ಕೆಲಸ ಮುಗಿಸಿ ಮನೆಗೆ ಹೋಗುವಾಗ ರಾಡ್‌ನಿಂದ ತಲೆಗೆ ಹೊಡೆದು ಹಲ್ಲೆ ಮಾಡಲಾಗಿದ್ದು, ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಅಸು ನೀಗಿದ್ದಾರೆ.
ಹಲ್ಲೆಗೈದ ದುಷ್ಕರ್ಮಿಗಳು ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಕಮಿಷನರ್ ಭೂಷಣ್ ಬೋಸರೆ, ಡಿಸಿಪಿ ನಾರಾಯಣ್ ಭರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಫ್ಎಸ್ಎಲ್ ತಂಡ ಆಗಮಿಸಿದೆ. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆ ಶವಗಾರಕ್ಕೆ ಮೃತೇಹ ಒಯ್ಯಲಾಗಿದೆ. ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.