ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಮಹಿಳೆ ಸಜೀವ ದಹನಗೊಂಡಿದ್ದಾರೆ. ಮಹಾರಾಷ್ಟ್ರದ ಜಲಗಾಂವ್‌ನಿಂದ ಛತ್ರಪತಿ ಸಂಭಾಜಿ ನಗರಕ್ಕೆ ಹೋಗುವ ದಾರಿಯಲ್ಲಿ ಈ ಭೀಕರ ದುರಂತ ಸಂಭವಿಸಿದೆ.
ಟೈರ್ ಸ್ಫೋಟಗೊಂಡು ಕಾರಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಜನರು ಸ್ಥಳಕ್ಕೆ ಧಾವಿಸಿ ಕಾರಿನ ಒಳಗಿದ್ದವರ ರಕ್ಷಣೆಗಾಗಿ ಕಾರಿನ ಕಿಟಕಿಗಳನ್ನು ಒಡೆದು ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ , ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿಯೇ ಬೆಂಕಿ ಇದ್ದಕ್ಕಿದ್ದಂತೆ ಹೆಚ್ಚಾಗಿ ಕಾರಿನಲ್ಲಿದ್ದ ಮಹಿಳೆ ಸುಟ್ಟು ಕರಕಲಾಗಿದ್ದಾರೆ.
ಹೆದ್ದಾರಿಯ ಜಂಕ್ಷನ್ ಬಳಿ ಕಾರು ಹೊತ್ತಿ ಉರಿಯುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರಿಗೆ ಬೆಂಕಿ ಬಿದ್ದ ಮಾಹಿತಿ ತಿಳಿದ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಅಷ್ಟರಲ್ಲಿ ಒಳಗಿದ್ದ ಮಹಿಳೆ ಸಜೀವ ದಹನಗೊಂಡಿದ್ದಾರೆ.
ಕಾರಿನಲ್ಲಿ ಬೇರೆ ಪ್ರಯಾಣಿಕರು ಇದ್ದರೆ ಇಲ್ಲವೇ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಲಿವ್-ಇನ್ ರಿಲೇಷನ್‌ಶಿಪ್: ಯುವತಿ ನಿಗೂಢ ಸಾವು, ಪ್ರಿಯಕರ ಪರಾರಿ
ಭೋಪಾಲ್‌ನ 27 ವರ್ಷದ ಮಾಡೆಲ್ ಖುಷ್ಬೂ ಅಹಿರ್ವಾರ್ ನಿಗೂಢವಾಗಿ ಮೃತಪಟ್ಟಿದ್ದು, ಬಾಯ್ಫ್ರೆಂಡ್ ಆಕೆಯನ್ನು ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದಾನೆ.
ಸೆಹೋರ್ ಜಿಲ್ಲೆಯ ಭೈನ್ಸಖೇಡಿ ಆಸ್ಪತ್ರೆಯ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಟುಂಬದ ಮನವಿಯನ್ವಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭೋಪಾಲ್‌ನ ಗಾಂಧಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ.
ಮಗಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಮೃತ ಯುವತಿಯ ತಾಯಿ ಲಕ್ಷ್ಮಿ ಅಹಿರ್ವಾರ್ ಆರೋಪಿಸಿದ್ದಾರೆ. ನಮಗೆ ನ್ಯಾಯ ಬೇಕು. ಆಕೆಯನ್ನು ಕೊಂದವರಿಗೆ ಶಿಕ್ಷೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ. ಯುವತಿ ಖಾಸಿಮ್ ಎಂಬ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದಳು. ಆತ ಆಕೆಯನ್ನು ಉಜ್ಜಯಿನಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿಂದ ಭೋಪಾಲ್‌ಗೆ ಹಿಂತಿರುಗುತ್ತಿದ್ದಾಗ ಖುಷ್ಬೂ ಸ್ಥಿತಿ ಹದಗೆಟ್ಟಿತು. ಆಕೆಯನ್ನು ಆಸ್ಪತ್ರೆಗೆ ಸೇರಿಸಿ ಖಾಸಿಮ್ ಓಡಿಹೋಗಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಯು ಖುಷ್ಬೂ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದನು ಎಂದು ಆಕೆಯ ಕುಟುಂಬ ಆರೋಪಿಸಿದ್ದು, ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


