ಮನೆಯಲ್ಲಿದ್ದ ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬಾಲ್ಯದಿಂದಲೂ ಇರುವೆಗಳನ್ನು ಕಂಡರೆ ಭಯಭೀತರಾಗುತ್ತಿದ್ದ 25 ವರ್ಷದ ಮಹಿಳೆ ಮೂರು ವರ್ಷದ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟುಬಂದಿದ್ದರು. ಸಂಜೆ ಅವರ ಪತಿ ಮನೆಗೆ ಬಂದಾಗ ಬಾಗಿಲು ಒಳಗಿನಿಂದ ಮುಚ್ಚಿತ್ತು, ಅಕ್ಕಪಕ್ಕದವರ ಸಹಾಯದಿಂದ ಬಾಗಿಲು ತೆರೆದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿತುವುದು ಕಂಡು ಬಂದಿದೆ.
ಸೀರೆಯಿಂದ ಮಹಿಳೆ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪಕ್ಕದಲ್ಲೇ ಡೆತ್‌ನೋಟ್ ಪತ್ತೆಯಾಗಿದ್ದು, ನನಗೆ ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ. ನೀವು(ಪತಿ) ಮತ್ತು ಮಗಳು ಕ್ಷೇಮವಾಗಿರಿ ಎಂದು ಬರೆಯಲಾಗಿತ್ತು.
ಮನೆಯನ್ನು ಸ್ವಚ್ಛಗೊಳಿಸುತ್ತಿದ್ದಾಗ ಇರುವೆ ಕಂಡು ಭಯದಿಂದ ಇಂತಹ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪೊಲೀಸರು ಅನುಮಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಹಿಳೆ ಇರುವೆ ಭಯದಿಂದ ಈ ಹಿಂದೆ ಆಸ್ಪತ್ರೆಯಲ್ಲಿ ಆಪ್ತ ಸಮಾಲೋಚನೆಗೂ ಒಳಪಟ್ಟಿದ್ದರು ಎನ್ನಲಾಗಿದೆ.
ಶ್ರೀಕಾಂತ್ ಮತ್ತು ಮನೀಷಾ (25) ದಂಪತಿ ಮಗಳೊಂದಿಗೆ ತೆಲಾಂಗಣದ ಸಂಗರೆಡ್ಡಿ ಜಿಲ್ಲೆಯಲ್ಲಿ ಅಮೀನ್‌ಪುರದಲ್ಲಿ ವಾಸಿಸುತ್ತಿದ್ದಾರೆ. ಮನೀಷಾ ಕೆಲವು ಸಮಯದಿಂದ ಇರುವೆಗಳ ಬಗ್ಗೆ ತೀವ್ರ ಭಯದಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಮನೀಷಾ ಕುಟುಂಬ ಸದಸ್ಯರು ಅನೇಕ ಆಸ್ಪತ್ರೆಗಳಲ್ಲಿ ತೋರಿಸಿ ಚಿಕಿತ್ಸೆ ಕೂಡ ಕೊಡಿಸಿದ್ದಾರೆ.
ಸ್ವಂತ ಅಣ್ಣನಿಂದ ಮಗುವಿಗೆ ಜನ್ಮವಿತ್ತ ಅಪ್ರಾಪ್ತ ವಯಸ್ಕ ಬಾಲಕಿ
ಅಪ್ರಾಪ್ತ ವಯಸ್ಕ ತಂಗಿ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮಗುವಿನ ಜನನಕ್ಕೆ ಅಣ್ಣ ಕಾರಣನಾಗಿರುವ ಪ್ರಕರಣ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದು, ಅಣ್ಣನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಆರೋಪಿಯನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆರೋಪಿ ತಂಗಿ ಜೊತೆ ದೈಹಿಕ ಸಂಬಂಧ ಬೆಳೆಸಿದ್ದ. ಫೆಬ್ರವರಿಯಿಂದ ಇದು ನಡೆದುಕೊಂಡು ಬಂದಿದ್ದು, ವಿಷಯವನ್ನು ಮನೆಯವರಿಗೆ ತಿಳಿಸಿದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಆರೋಪಿ ಬೆದರಿಸಿದ್ದ ಎನ್ನಲಾಗಿದೆ.
ಬಾಲಕಿ ಮನೆ ಕೆಲಸ ಮಾಡುವಾಗ ಜಾರಿ ಬಿದ್ದಿದ್ದು, ಸೊಂಟಕ್ಕೆ ಏಟು ಬಿದ್ದಿತ್ತು. ಆಸ್ಪತ್ರೆಯಲ್ಲಿ ವೈದ್ಯರು ಸ್ಕ್ಯಾನಿಂಗ್ ಮಾಡಿಸುವಂತೆ ಸೂಚಿಸಿದ್ದರು. ಕೊಪ್ಫಳ ಜಿಲ್ಲಾಸ್ಪತ್ರೆಗೆ ಸಂತ್ರಸ್ತೆಯನ್ನು ಕರೆದುಕೊಂಡು ಬರಲಾಗಿದ್ದು, ಈ ವೇಳೆ ಹೊಟ್ಟೆಯಲ್ಲಿ ಮಗು ಇರುವ ವಿಷಯ ಬೆಳಕಿಗೆ ಬಂದಿದೆ. ಅದೇ ದಿನ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.


