ಏಳು ವರ್ಷದ ಮಗನ ಎದುರೇ ಕಾನ್ಸ್ಟೆಬಲ್ ಪತಿಯನ್ನು ಕೊಲೆ ಮಾಡಿದ ಮಹಿಳೆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಹಮದಾಬಾದ್ನ ಡ್ಯಾನಿಲಿಮ್ಡಾ ಪೊಲೀಸ್ ಲೈನ್ ಕ್ವಾರ್ಟರ್ಸ್‌ನಲ್ಲಿ ನಡೆದಿದೆ ಎಂದು ಉಪ ಪೊಲೀಸ್ ಆಯುಕ್ತ ರವಿ ಮೋಹನ್ ಸೈನಿ ತಿಳಿಸಿದ್ದಾರೆ.
ಎ ಡಿವಿಷನ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮುಖೇಶ್ ಪರ್ಮಾರ್ ಮತ್ತು ಪತ್ನಿ ಸಂಗೀತಾ ನಡುವೆ ವೈವಾಹಿಕ ಭಿನ್ನಾಭಿಪ್ರಾಯವಿರುವುದು ತಿಳಿದುಬಂದಿದೆ. ಬೆಳಗ್ಗೆ ದಂಪತಿ ನಡುವೆ ಜಗಳ ನಡೆದಿತ್ತು, ಸಂಗೀತಾ ದೊಣ್ಣೆಯಿಂದ ಗಂಡನ ತಲೆಗೆ ಹೊಡೆದಿದ್ದರು. ಪರ್ಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಳಿಕ ಸಂಗೀತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂಗೀತಾ ಬರೆದಿಟ್ಟಿರುವ ಆತ್ಮಹತ್ಯೆ ಪತ್ರ ಗಮನಿಸಿದಾಗ ಇದು ವೈವಾಹಿಕ ಮತ್ತು ಆರ್ಥಿಕ ಸಮಸ್ಯೆಗಳಿಂದಾಗಿ ಜಗಳವಾಗಿದೆ ಎಂಬುದು ತಿಳಿಯುತ್ತದೆ ಎಂದು ದು ಬಹಿರಂಗಪಡಿಸಿದೆ ಎಂದು ಉಪ ಪೊಲೀಸ್ ಆಯುಕ್ತ ರವಿ ಮೋಹನ್ ಸೈನಿ ಹೇಳಿದ್ದಾರೆ.