Menu

ಲಿವ್‌-ಇನ್‌ನಲ್ಲಿದ್ದಾತ ಬೇರೆಯವಳೊಂದಿಗೆ ಮದುವೆ: ವೀಡಿಯೊ ಮಾಡಿಟ್ಟು ಮಹಿಳೆ ಸುಸೈಡ್‌

ನಾಲ್ಕು ವರ್ಷ ನನ್ನ ಜೊತೆ ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಬೇರೆ ಮಹಿಳೆಯನ್ನು ಮದುವೆಯಾಗುತ್ತಿರುವುದಾಗಿ ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

ಆತ್ಮಹತ್ಯೆಗೂ ಮುನ್ನ ಆಕೆ ವೀಡಿಯೊ ಮಾಡಿಟ್ಟು, ತಾಜ್‌ಗಂಜ್ ಪೊಲೀಸ್ ಠಾಣೆಯ ಜೆ.ವಿ. ಗೌತಮ್ ನಾಲ್ಕು ವರ್ಷಗಳಿಂದ ತನ್ನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದು, ಮದುವೆಯಾಗುವುದಾಗಿ ಭರವಸೆ ನೀಡಿದ್ದ. ನಂತರ ಮದುವೆಯಾಗಲು ನಿರಾಕರಿಸಿದ ಎಂದು ಆರೋಪಿಸಿದ್ದಾರೆ.

ಆತನೊಂದಿಗಿದ್ದ ಅವಧಿಯಲ್ಲಿ ತಾನು ದೈಹಿಕ ಮತ್ತು ಮಾನಸಿಕ ಶೋಷಣೆಗೆ ಒಳಗಾಗಿದ್ದೇನೆ ಎಂದು ಆಕೆ ಹೇಳಿಕೊಂಡಿದ್ದಾರೆ. ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ, ಏನೂ ಮಾಡಲು ಸಾಧ್ಯವಿಲ್ಲ ಮತ್ತು ಕಾನ್‌ಸ್ಟೆಬಲ್ ಕಾನೂನು ಕ್ರಮದಿಂದ ಬಚಾವ್‌ ಆಗ್ತಾರೆ ಎಂದು ಹೇಳಲಾಗಿತ್ತು. ಆತನ ಕುಟುಂಬದವರು ತಮ್ಮ ಮದುವೆಗೆ ಅವಕಾಶ ನೀಡುವುದಿಲ್ಲ. ಆತ ಮತ್ತು ಆತನ ಕುಟುಂಬವು ನನಗೆ ಹಿಂಸೆ ನೀಡಿದೆ ಎಂದು ತಿಳಿಸಿದ್ದಾರೆ.

ಸಂತ್ರಸ್ತೆಯು ವೀಡಿಯೊದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೂ ಮನವಿ ಮಾಡಿಕೊಂಡಿದ್ದು, ಬದುಕಿದ್ದಾಗ ನ್ಯಾಯ ಸಿಕ್ಕಿಲ್ಲ. ಮರಣದ ನಂತರ ನ್ಯಾಯ ಕೊಡಿಸಿ ಎಂದು ಕೇಳಿದ್ದು, ವೀಡಿಯೊ ವೈರಲ್‌ ಆಗಿದೆ. ವೈರಲ್ ಆಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದ ನಂತರ ಕಾನ್‌ಸ್ಟೆಬಲ್ ಜೆ.ವಿ.ಗೌತಮ್ ಅವರನ್ನು ಅಮಾನತುಗೊಳಿಸಲಾಗಿದೆ.

ಸಂತ್ರಸ್ತೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯವರು. ಮೊದಲೇ ಮದುವೆಯಾಗಿ ವಿಚ್ಛೇದನ ಪಡೆದಿದ್ದರು. ಆಗ್ರಾದಲ್ಲಿ ಖಾಸಗಿ ಉದ್ಯೋಗದಲ್ಲಿ ಕೆಲಸ ಮಾಡುತ್ತಿದ್ದಾಗ ಕಾನ್‌ಸ್ಟೆಬಲ್‌ ಪರಿಚಯವಾಗಿ ಪ್ರೀತಿ ಶುರುವಾಗಿತ್ತು.

Related Posts

Leave a Reply

Your email address will not be published. Required fields are marked *