ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದು ಹಿಂಬದಿ ಸವಾರ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ನಡೆದ ಈ ದುರಂತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಆರ್. ಮಾರ್ಕೆಟ್‌ನಿಂದ ಹಂಚಿಪುರ ಕಾಲೋನಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್, ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ಘಟನೆಯಿಂದ ಬೈಕ್‌ನ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಅಸು ನೀಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎರಡು ದಿನಗಳ ಹಿಂದೆ ಪೀಣ್ಯ 2ನೇ ಹಂತದಲ್ಲಿ ಬಿಎಂಟಿಸಿ ಬಸ್ ರಸ್ತೆಬದಿಯ ಕ್ಯಾಂಟೀನ್‌ಗೆ ಬಸ್ ಡಿಕ್ಕಿ ಹೊಡೆದು ಯುವತಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದರು. ಈ ಘಟನೆಗಳು ಬಿಎಂಟಿಸಿ ಬಸ್‌ಗಳ ಮತ್ತು ನಾಗರಿಕೆರ ಸುರಕ್ಷತೆಗೆ ಸಂಭಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.