ಬೆಂಗಳೂರಿನ ಮೆಯೋಹಾಲ್ ಜಂಕ್ಷನ್‌ನಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಜಲಿ (36) ಮೃತಪಟ್ಟಿರುವ ಮಹಿಳೆ.
ಜಂಕ್ಷನ್‌ನಲ್ಲಿ ನಿಂತಿದ್ದ ಕಾರಿಗೆ ಗೂಡ್ಸ್ ವಾಹನ ಬಂದು ಡಿಕ್ಕಿ ಹೊಡೆದಾಗ ಕಾರು ಮುಂದೆ ಇದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಆಗ ಬೈಕ್‌ನಲ್ಲಿದ್ದ ವಿಜಯ್ ಕುಮಾರ್ ಹಾಗೂ ಅಂಜಲಿ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿ ಅಂಜಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಜಯ್ ಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೆ ಕಾರಣನಾಗಿರುವ ಗೂಡ್ಸ್ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಗೂಡ್ಸ್ ವಾಹನದ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.