Menu

ಅನೈತಿಕ ಸಂಬಂಧ ಬೇಡವೆಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆಗೈದ ಮಹಿಳೆ

ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಅನೈತಿಕ ಸಂಬಂಧ ಮುಂದುವರಿಸುವುದು ಡವೆಂದ ಯುವಕನ ಮೇಲೆ ಮಹಿಳೆಯೇ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಕಾರ್ತಿಕ್ ಎಂಬ ಯುವಕ ದೀಪಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮನೆಯವರ ಬುದ್ಧಿವಾದದ ಬಳಿಕ ಆಕೆಯ ಸಹವಾಸ ತೊರೆದಿದ್ದ. ಇದರಿಂದ ಆಕ್ರೋಶಗೊಂಡ ದೀಪಾ ಕಾರ್ತಿಕ್ ಅಂಗಡಿಯೊಂದರಲ್ಲಿದ್ದಾಗ ಕಾರಿನಲ್ಲಿ ಗ್ಯಾಂಗ್ ಜೊತೆ ಬಂದು ಮಾರಣಾಂತಿಕ ಹಲ್ಲೆ ಮಾಡಿಸಿದ್ದಾಳೆ.

ಆಗ ದೀಪಾ ಕಾರಿನಲ್ಲೇ ಕುಳಿತಿದ್ದರೆ ಇತರ ಆರೋಪಿಗಳು ಅಂಗಡಿಯ ಬಳಿ ಇದ್ದ ಕಾರ್ತಿಕ್ ಮೇಲೆ ಲಾಂಗ್‌ ಹಾಗೂ ಮಚ್ಚುಗಳಿಂದ ದಾಳಿ ನಡೆಸಿದ್ದರು. ಆಗ ಸಾರ್ವಜನಿಕರು ಗ್ಯಾಂಗ್ ವಿರುದ್ಧ ತಿರುಗಿ ಬಿದ್ದ ಕಾರಣ ಸ್ಥಳದಿಂದ ಪರಾರಿಯಾಗಿದ್ದರು.
ಘಟನೆಯ ಕುರಿತು ದೂರು ದಾಖಲಿಸಿಕೊಂಡ ದೊಡ್ಡಬೆಳವಂಗಲ ಪೊಲೀಸರು ತನಿಖೆ ಆರಂಭಿಸಿದ್ದು, ಹಲ್ಲೆ ಸಂಚು ರೂಪಿಸಿ ಪರಾರಿಯಾಗಿದ್ದ ದೀಪಾ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ತರಬೇತಿ ಹೆಸರಿನಲ್ಲಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ

ಜೇನುಕೃಷಿ ತರಬೇತಿ ಹೆಸರಿನಲ್ಲಿ ಬೆಳಗಾವಿಯ ಬಾಲಕಿಯ ಮೇಲೆ ಮಂಗಳೂರಿನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ 17 ದಿನ ನಿರಂತರ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಆರೋಪಿ ಅಬ್ದುಲ್ ಗಫೂರ್ ವಿರುದ್ಧ ಪೋಕ್ಸೋ ಮತ್ತು ಭಾರತೀಯ ನ್ಯಾಯ ಸಂಹಿತೆ ಅಡಿ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.

ಜೇನುಕೃಷಿ ಕಲಿಸುವ ನೆಪದಲ್ಲಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಲಾಗಿದೆ. ಬೆಳಗಾವಿಯ ಬಾಲಕಿಯನ್ನು ಜೇನುಕೃಷಿ ತರಬೇತಿ ನೀಡುವುದಾಗಿ ಹೇಳಿ ಆರೋಪಿ ಅಬ್ದುಲ್ ಗಫೂರ್ ಮನೆಯಲ್ಲಿ ಇರಿಸಿಕೊಂಡಿದ್ದ. ಪೋಷಕರು ಎರಡು ತಿಂಗಳ ಹಿಂದೆ ಆರೋಪಿಯ ಮನೆಯಲ್ಲಿ ಆಕೆಯನ್ನು ಬಿಟ್ಟು ಹೋಗಿದ್ದರು.

Related Posts

Leave a Reply

Your email address will not be published. Required fields are marked *