ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಮಹಿಳೆ, ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್ ಮನೆಯಲ್ಲಿದ್ದ ಅನಿತಾ(೨೫) ಮೃತಪಟ್ಟವರು.
ಬುಧವಾರ ರಾತ್ರಿ ಎಂಟು ಗಂಟೆಗೆ ಮನೆಗೆ ಹೋಗುವಾಗ ಆನೆ ದಾಳಿ ಮಾಡಿದೆ. ಗಾಯಗೊಂಡಿದ್ದ ಅವರಿಗೆ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಶಿವಮೊಗ್ಗಕ್ಕೆ ಕರೆದೊಯ್ಯುವಾಗ
ಮಾರ್ಗ ಮಧ್ಯೆ ಅಸು ನೀಗಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.