ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಆಗು ಎಂದು ಒತ್ತಾಯಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ರೇಣುಕಾ ಕೊಲೆಯಾಗಿರುವ ಮಹಿಳೆ, ಅ. 31ರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಆರೋಪಿ ಅಂಬೇಡ್ಕರ್ ಅಲಿಯಾಸ್ ಕುಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ರೇಣುಕಾ ವಿವಾಹಿತೆಯಾಗಿದ್ದು, ಪತಿಯಿಂದ ದೂರವಾಗಿ ಮಗುವಿನೊಂದಿಗೆ ವಾಸವಿದ್ದರು. ಬ್ಯಾನರ್ ಪ್ರಿಂಟಿಂಗ್ ಮಾಡುವ ಕೆಲಸ ಮಾಡಿಕೊಂಡಿದ್ದ ಕುಟ್ಟಿ ಎಂಬಾತನ ಪರಿಚಯವಾಗಿ ಸ್ನೇಹ ಪ್ರೀತಿಗೆ ತಿರುಗಿದ್ದು, ಮದುವೆಯಾಗುವಂತೆ ರೇಣುಕಾ ಒತ್ತಾಯಿಸಿ ಟೈಮ್ಪಾಸ್ ಪ್ರೀತಿ ಬೇಡ ಎಂದಿದ್ದಳು.
ನಿನ್ನ ಬಳಿ ಮಾತನಾಡಬೇಕು ಬಾ ಎಂದು ರೇಣುಕಾಳನ್ನು ಕರೆಸಿಕೊಂಡ ಆರೋಪಿ, ಪಿಳ್ಳಣ್ಣ ಗಾರ್ಡನ್ ಬಿಬಿಎಂಪಿ ಶಾಲೆ ಬಳಿ ಆಕೆಗೆ ಚಾಕುವಿನಿಂದ ಇರಿದಿದ್ದ. ರೇಣುಕಾಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾದೆ ಅಸು ನೀಗಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಕುಟ್ಟಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಯುವತಿಯ ಶವ ಪತ್ತೆ
ಬೆಂಗಳೂರಿನ ಗಾಯತ್ರಿ ನಗರದ ರೈಲ್ವೆ ಪ್ಯಾರಲಲ್ ರಸ್ತೆ ಬಳಿ ದಾವಣಗೆರೆಯ ಸುಪ್ರಿಯಾ ಎಂಬ ಯುವತಿಯ ಶವ ಪತ್ತೆಯಾಗಿದೆ. ಎರಡು ದಿನಗಳಿಂದ ಲಾಕ್ ಆಗಿದ್ದ ಮನೆಯಲ್ಲಿ ನೇಣು ಬಿಗಿದ ರೀತಿಯಲ್ಲಿ ಶವ ಕಂಡು ಬಂದಿದೆ.
ಕಳೆದ ಒಂದೂವರೆ ಎರಡು ತಿಂಗಳಿಂದ ಅವರ ಚಟುವಟಿಕೆ ಕಡಿಮೆಯಾಗಿತ್ತು. ಸುಪ್ರಿಯಾ ಬೈಕ್ಗಳನ್ನು ಓಡಿಸುವಲ್ಲಿ ಆಸಕ್ತಿ ಹೊಂದಿದ್ದರು. ಇತ್ತೀಚೆಗೆ ಅವರು ದೈಹಿಕವಾಗಿ ಕುಗ್ಗಿದ್ದರು, ಡಯಟಿಷಿಯನ್‌ಸಲಹೆಯಂತೆ ಆಹಾರ ಪದ್ಧತಿ ಅನುಸರಿಸುತ್ತಿರುವುದಾಗಿ ಹೇಳಿಕೊಂಡಿದ್ದರು ಎಂಬುದಾಗಿ ಅಕ್ಕಪಕ್ಕದ ಮನೆಯವರು ತಿಳಿಸಿದ್ದಾರೆ.


