ಮಂಜಪ್ಪ (40) ಕೊಲೆಯಾದ ವ್ಯಕ್ತಿ, ಶಬೀನಾ (38) ಕೊಲೆ ಮಾಡಿರುವ ಆರೋಪಿ ಮಹಿಳೆ. ಮದ್ಯದ ಅಮಲಿನಲ್ಲಿ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗಿದೆ. ಕುಡಿದಿದ್ದ ಮತ್ತಿನಲ್ಲಿ ಮಹಿಳೆಯೊಬ್ಬರು ಪ್ರಿಯಕರನನ್ನು ಸೀರೆಯಲ್ಲಿ ಕತ್ತು ಬಿಗಿದು ಹತ್ಯೆ ಮಾಡಿರುವ ಘಟನೆ ದಾವಣಗೆರೆ ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ.
ಮಂಜಪ್ಪ ಪತ್ನಿ ಮತ್ತು ಮಕ್ಕಳಿಂದ ದೂರವೀದ್ದು, ಕಳೆದ ಆರು ವರ್ಷಗಳಿಂದ ವಿಚ್ಛೇದಿತೆ ಶಬೀನಾ ಜೊತೆ ವಾಸವಿದ್ದ. ಹದಡಿ ಠಾಣೆ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.
ತಂದೆ-ಮಗಳ ಹತ್ಯೆಗೈದ ಆರೋಪಿಗಳ ಬಂಧನ
ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ ಮಗಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಾಜಿ ಯೋಧ ರುದ್ರಪ್ಪ ಅವರ ಸಹೋದರ ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಮತ್ತು ಪುತ್ರ ಮಡಿವಾಳಪ್ಪ ಕುಂದರಗಿ ಬಂಧಿತ ಆರೋಪಿಗಳು. ಕೊಲೆಗೆ ಬಳಸಿದ ಆಯುಧಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಸ್ತಿ ವಿಚಾರಕ್ಕೆ ಅಣ್ಣ ತಮ್ಮಂದಿರ ನಡುವೆ ಗಲಾಟೆ ನಡೆಯುತ್ತಿತ್ತು. ಆಸ್ತಿ ಪಾಲುದಾರಿಕೆಗೆ ಅರ್ಜಿ ಸಲ್ಲಿಸಲು ಒಬ್ಬ ಸಹೋದರ ಗ್ರಾಮ ಪಂಚಾಯ್ತಿಗೆ ಬಂದಿದ್ದಾಗ ಕೊಲೆ ಮಾಡಲಾಗಿತ್ತು. ರುದ್ರಪ್ಪ ಕುಂದರಗಿ (67), ಪುತ್ರಿ ಶಶಿಕಲಾ ಕುಂದರಗಿ (26) ಕೊಲೆಯಾದವರು.


