ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದ ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಪ್ರತಿಭಾ (29) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಇದು ಆಕಸ್ಮಿಕ ಸಾವೇ, ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬ ಅನುಮಾನ ಗಳು ವ್ಯಕ್ತವಾಗಿವೆ.
ಹೊರ ವಲಯದಲ್ಲಿರುವ ತೋಟದ ಮನೆಯಲ್ಲಿ ಪ್ರತಿಮಾ ವಾಸವಾಗಿದ್ದರು. ಪ್ರತಿಮಾ ಅವರು ಬಾಬು ಎಂಬವರ ಎರಡನೇ ಪತ್ನಿಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದಿಂದ ಗಲಾಟೆಯಾಗಿ ಪತಿ ಬಾಬು ಕೊಲೆ ಮಾಡಿರುವುದಾಗಿ ಪ್ರತಿಭಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಸ್ಥಳಕ್ಕೆ ಕೋಡಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರತಿಮಾ ಕುಟುಂಬಸ್ಥರ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.


