ಬೇಲೂರು ಪಟ್ಟಣದ ಗಾಣಿಗರ ಬೀದಿಯ ಮನೆಯೊಂದರಲ್ಲಿ ಮಹಿಳೆಯ ಶವ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಎಂದು ಗುರುತಿಸಲಾಗಿದೆ.
ಈ ಮಹಿಳೆ ಪತಿಯಿಂದ ದೂರಾಗಿ ಎಂಟು ದಿನಗಳ ಹಿಂದೆ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದು ನೆಲೆಸಿದ್ದರು. ಎರಡು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದ್ದನ್ನು ಸ್ಥಳೀಯರು ಗಮನಿಸಿದಾಗ ಈ ಪ್ರಕರಣ ಬಯಲಾಗಿದೆ.
ಮನೆಯ ಬಾಗಿಲು ತೆರೆದಿದ್ದರೂ ಯಾರ ಸುಳಿವು ಇಲ್ಲದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಸ್ಪಂದನ ಮೃತದೇಹ ಪತ್ತೆಯಾಗಿದೆ.
ಮನೆಯಲ್ಲಿ ಸಂಪೂರ್ಣ ಬೆತ್ತಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿರುವುದರಿಂದ ಇದೊಂದು ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಶ್ವಾನದಳ, ಸೋಕೊ ಟೀಂ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.


