Menu

ಕೋಲಾರದಲ್ಲಿ ಬೆಳಿಗ್ಗೆ ಮದುವೆ, ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಯುವಕ!

kolar news

ಕೋಲಾರ: ಬೆಳಿಗ್ಗೆ ಮದುವೆಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕೋಲಾರದಲ್ಲಿ ನಡೆದಿದೆ.

ಕಳೆದ 8 ವರ್ಷಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿ ಮೂಲದ ಹರೀಶ್ ಬಾಬು (33) ನೇಣಿಗೆ ಶರಣಾಗಿದ್ದಾರೆ.

3 ದಿನಗಳಿಂದ ರಜೆಯಲ್ಲಿದ್ದ ಹರೀಶ್ ಬಾಬು, ಬುಧವಾರ ಬೆಳಿಗ್ಗೆ ರಿಜಿಸ್ಟಾರ್ ಮ್ಯಾರೇಜ್ ಆಗಿದ್ದಾರೆ. ಆದರೆ ಅದೇ ದಿನ ರಾತ್ರಿ 11:30ರ ಸುಮಾರಿಗೆ ಆಸ್ಪತ್ರೆಯ ಇಎನ್‌ಟಿ ವಿಭಾಗದ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಿಂಗಳ ಹಿಂದೆ ಯುವತಿಯೊಬ್ಬಳು ನಮ್ಮ ಮನೆಗೆ ಬಂದು ನಾನು ಹಾಗೂ ಹರೀಶ್ ಮದುವೆಯಾಗುತ್ತೇವೆ ಎಂದು ಹೇಳಿದ್ದಳು. ಬೇಡ, ನಾವೇ ಮದುವೆ ಮಾಡುತ್ತೇನೆ ಎಂದು ಹೇಳಿದ್ದೆ. ಬುಧವಾರ ಬೆಳಿಗ್ಗೆ ಯುವತಿ ಕಡೆಯವರು ಬಂದು ನನ್ನ ಮಗನನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಮದುವೆ ಮಾಡಿಸಿದ್ದಾರೆ ಎಂದು ಹರೀಶ್ ಬಾಬು ತಾಯಿ ಆರೋಪಿಸಿದ್ದಾರೆ.

ಮೃತ ಹರೀಶ್ ಬುಧವಾರ ರಾತ್ರಿ 11:15ರ ಸುಮಾರಿಗೆ ಆಸ್ಪತ್ರೆಯೊಳಗೆ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮದ್ಯ ಸೇವನೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *