ಮೈಸೂರಿನ ಶಾಂತಿ ನಗರದಲ್ಲಿ ಬುಧವಾರ ಬೆಳಗ್ಗೆಯೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಸೈಯದ್ ಸೂಫಿಯಾನ್ (19) ಕೊಲೆಯಾಗಿರುವ ಯುವಕ.
ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸೈಯದ್ ಸೂಫಿಯಾನ್ ಸ್ನೇಹಿತನ ಜೊತೆ ಟೀ ಕುಡಿಯಲು ಹೋಗಗಿದ್ದಾಗ ಈ ಕೊಲೆ ನಡೆದಿದೆ.
ದಾವಣಗೆರೆ ಕೆರೆಯಲ್ಲಿ ಯುವಕರಿಬ್ಬರ ಶವ ಪತ್ತೆ
ದಾವಣಗೆರೆ ನಗರದ ಕುಂದುವಾಡ ಕೆರೆಯಲ್ಲಿ ಇಬ್ಬರು ಯುವಕರ ಶವ ಪತ್ತೆಯಾಗಿದೆ. ಶಾಂತಿನಗರದ ಚೇತನ್ (22), ಮನು (23) ಮೃತ ಯುವಕರು. ಕಳೆದ ಎರಡು ದಿನಗಳಿಂದ ನಾಪತ್ತೆ ಯಾಗಿದ್ದರು.
ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಇಬ್ಬರ ಶವಗಳು ಕೆರೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವಕರು ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದರಾ ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


