Menu

ಬಿಡದಿಯ ಹೋಟೆಲ್‌ನಲ್ಲಿ ಯುವಕನ ಕೊಲೆ

ಬಿಡದಿ ಬಳಿಯ ಕದಂಬ ಹೋಟೆಲ್‌ನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನೊಬ್ಬನ ಕೊಲೆ ಮಾಡಲಾಗಿದೆ. ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ.

ಎರಡೂವರೆ ತಿಂಗಳಿನಿಂದ ನಿಶಾಂತ್‌ ಕದಂಬ ಹೋಟೆಲ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಹಳೆ ದ್ವೇಷಕ್ಕೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಹೋಟೆಲ್ ನಲ್ಲಿ ಮಲಗಿದ್ದ ಆತನಿಗೆ ಚಾಕುವಿನಿಂದ ಇರಿದು ಕೊಲೆ ಮಾರುವ ದುಷ್ಕರ್ಮಿಗಳು ಹೋಟೆಲ್‌ನ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ತೆಗೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದ್ದಾರೆ.

ನಿಶಾಂತ್ ವಿರುದ್ಧ ಈ ಹಿಂದೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ತನಿಖೆ ಕೈಗೊಂಡಿರುವ ಬಿಡದಿ ಪೊಲೀಸರು ಆರೋಪಿಗಳ ಬಂಧನಕ್ಕೆ ಹುಡುಕಾಟ ಮುಂದುವರಿಸಿದ್ದಾರೆ.

ತುಮಕೂರಿನಲ್ಲಿ ಯುವಕನ ಕೊಲೆ

ತುಮಕೂರಿನ ಜಯನಗರ ಬಳಿಯ ಮಂಜುನಾಥ ನಗರದಲ್ಲಿ ಚಾಕುವಿನಿಂದ ಚುಚ್ಚಿ ಯುವಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅಭಿಷೇಕ್ (26) ಕೊಲೆಯಾದ ಯುವಕ.

ಕ್ಯಾತಸಂದ್ರ ಸುಭಾಷ್ ನಗರ ನಿವಾಸಿಯಾಗಿರುವ ಅಭಿಷೇಕ್ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಚಾಕುವಿನಿಂದ ಚುಚ್ಚಿ ಕೊಲೆಯಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಕೈಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *