Menu

ಕೋಲ್ಕತಾ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್‌: ಬಾಗಲಕೋಟೆಯ ವಿದ್ಯಾರ್ಥಿಯ ಬಂಧನ

ಕೋಲ್ಕತಾದಲ್ಲಿ ಯುವತಿಯನ್ನು ಹಾಸ್ಟೆಲ್‌ಗೆ ಕರೆಸಿಕೊಂಡು ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಪೊಲೀಸರು ಬಾಗಲಕೋಟೆಯ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಲೋಕಾಪುರ ಪಟ್ಟಣದ ನಿವಾಸಿ ಪರಮಾನಂದ ಟೋಪಣ್ಣನವರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಕೋಲ್ಕತಾದ ಜೋಕಾದಲ್ಲಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್‌ನಲ್ಲಿ ಎರಡೇ ವರ್ಷದ ಎಂಬಿಎ ವ್ಯಾಸಂಗ ಮಾಡುತ್ತಿದ್ದ.

ಆರೋಪಿ ಹಾಸ್ಟೆಲ್‌ಗೆ ಕರೆಸಿಕೊಂಡು ಫಿಜ್ಜಾ ತಿನ್ನಿಸಿ ಮತ್ತು ಬರುವ ಪಾನೀಯ ಕುಡಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ಇದರನ್ವಯ ಪೊಲೀಸರು ಆರೋಪಿ ಪರಮಾನಂದನನ್ನು ಬಂಧಿಸಿದ್ದಾರೆ. ಆದರೆ ಇಷ್ಟೆಲ್ಲ ಬೆಳವಣಿಗೆ ಮಧ್ಯೆ ಅತ್ಯಾಚಾರ ಆರೋಪವನ್ನು ಯುವತಿ ಕುಟುಂಬಸ್ಥರು ತಳ್ಳಿಹಾಕಿದ್ದರು.

ಪರಮಾನಂದ ಬಂಧನದ ಮಾಹಿತಿಯನ್ನು ಆತನ ಸ್ನೇಹಿತರು ಕುಟುಂಬಸ್ಥರಿಗೆ ನೀಡಿದ್ದು, ಪೋಷಕರು ಕೋಲ್ಕತಾಗೆ ತೆರಳಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಸದಸ್ಯರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅತ್ಯಾಚಾರದ ತನಿಖೆಗಾಗಿ ಕೋಲ್ಕತಾ ಪೊಲೀಸರು 9 ಸದಸ್ಯರ ಎಸ್‌ಐಟಿಯನ್ನು ರಚಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಕೊಡುವಂತೆ ಶಿಕ್ಷಣ ಸಂಸ್ಥೆಗೆ ಸೂಚಿಸಿದ್ದಾರೆ.

Related Posts

Leave a Reply

Your email address will not be published. Required fields are marked *