ಬೆಂಗಳೂರು ನಗರದ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿ, ಪಿಜಿ ಮಾಲೀಕ ಅಶ್ರಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ವಿದ್ಯಾರ್ಥಿನಿ ಸೋಲದೇವನಹಳ್ಳಿಯಲ್ಲಿರುವ ಪಿಜಿಗೆ ಸೇರಿ 10 ದಿನ ಆಗಿತ್ತು. ಶನಿವಾರ ತಡರಾತ್ರಿ ಕಾರಿನಲ್ಲಿ ವಿದ್ಯಾರ್ಥಿನಿಯನ್ನು ಪಿಜಿ ಮಾಲೀಕ ಅಶ್ರಫ್ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಾವಿರಾರು ಯುವತಿ, ಮಹಿಳೆಯರು ಕಾಲೇಜು ಹಾಗೂ ಕೆಲಸಕ್ಕೆಂದು ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದು ಬೆಂಗಳೂರಿನ ಪಿಜಿಗಳಲ್ಲಿ ನೆಲೆಸಿದ್ದಾರೆ. ಪಿಜಿ ಮಾಲೀಕನೇ ಈ ಕೃತ್ಯ ಎಸಗಿರುವುದರಿಂದ ಪಿಜಿಗಳಲಲಿನ ಸುರಕ್ಷತೆಗೆ ಸಂಬಂಧಿಸಿದಂತೆ ಈಗಾಗಲೇ ಇರುವ ಆತಂಕ ಮತ್ತಷ್ಟು ಹೆಚ್ಚಿದೆ.