Menu

ಮರದ ಕೊಂಬೆ ಬಿದ್ದು ಯುವಕ ಸಾವು: ಬಿಬಿಎಂಪಿ ಅರಣ್ಯಾಧಿಕಾರಿಗಳ ವಿರುದ್ಧ ಕೇಸ್‌

ಇತ್ತೀಚೆಗೆ ಮರದ ಕೊಂಬೆ ಬಿದ್ದು ಯುವಕ ಅಕ್ಷಯ್‌ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ ಅರಣ್ಯಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆನಕ್ ರಾಜ್ ಎಂಬವರು ಹನುಮಂತ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಿಬಿಎಂಪಿಯ ಆರ್‌ಎಫ್‌ಒ, ಎಸಿಎಫ್, ಡಿಎಫ್‌ಒ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಕ್ಷಯ್ ಮೃತಪಟ್ಟಿದ್ದಾನೆ, ಸಾವಿಗೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಗಳಾಗಿರುವ ಬಿಬಿಎಂಪಿ ಅರಣ್ಯಾಧಿಕಾರಿಗಳ ವಿಚಾರಣೆ ಮಾಡಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಜೂನ್‌ 15ರಂದು ಬಸವನಗುಡಿಯಬ್ರಹ್ಮ ಚೈತನ್ಯ ಮಂದಿರದ ಬಳಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ 29 ವರ್ಷದ ಅಕ್ಷಯ್‌ಗೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇದ್ದಿದ್ದರಿಂದ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಅಕ್ಷಯ್‌ ಬದುಕುಳಿಯುವ ಸಾಧ್ಯತೆ ಕಡಿಮೆಯಿತ್ತು. ಜೀವ ಉಳಿಯಲೆಂದು ಕುಟುಂಬದವರು ಮೃತುಂಜಯ ಹೋಮ ನೆರವೇರಿಸಿದ್ದರು. ಆದರೆ ಹೃದಯ ಸ್ತಂಭನಗೊಂಡು ನಿನ್ನೆ ಅಕ್ಷಯ್‌ ಮೃತಪಟ್ಟಿದ್ದರು.

Related Posts

Leave a Reply

Your email address will not be published. Required fields are marked *