ಧರ್ಮಸ್ಥಳದಲ್ಲಿ ಯುವತಿಯರ ಅಸಹಜ ಸಾವು ಪ್ರಕರಣದ ತನಿಖೆ ನಡೆಯುತ್ತಿರುವ ಹಂತದಲ್ಲಿಯೇ ಮೂವರು ಯೂಟ್ಯೂಬರ್ ಗಳ ಮೇಲೆ ಕೆಲವು ಸ್ಥಳೀಯ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರಿಂದ ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ನೇತ್ರಾವತಿ ತೀರದಲ್ಲಿ ಎಸ್ ಐಟಿ ಅಧಿಕಾರಿಗಳು 11ಎ ಮತ್ತು 13ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯ ಬುಧವಾರ ಪೂರ್ಣಗೊಳಿಸಿದ್ದು, ಯಾವುದೇ ಕುರುಹು ಪತ್ತೆಯಾಗದ ಕಾರಣ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ಆರಂಭಿಸಿದ್ದಾರೆ.
ಇದೇ ವೇಳೆ ಧರ್ಮಸ್ಥಳದ ನೇತ್ರಾವತಿ ನದಿಯ ಬಳಿ ಪಾಂಗಳ ಕ್ರಾಸ್ ಬಳಿ ವೀಡಿಯೂ ಮಾಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ಧರ್ಮಸ್ಥಳದ ಹೆಸರು ಹಾಳು ಮಾಡುತ್ತಿದ್ದಿರಾ ಎಂದು ಸ್ಥಳೀಯರು ಹಲ್ಲೆ ನಡೆಸಿದ್ದಾರೆ.
ಹಲ್ಲೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಗುಂಪು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ.
ಧರ್ಮಸ್ಥಳದ ಪ್ರತಿಷ್ಠಿತ ಕುಟುಂಬದ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡುತ್ತಿದ್ದಾ ಎಂದು ಆರೋಪಿಸಿ ಹಲ್ಲೆ ಮಾಡಲಾಗಿದ್ದು, ಹಲ್ಲೆಯಿಂದ ಯೂಟ್ಯೂಬರ್ ಗಳ ವಾಹನ ಜಖಂಗೊಂಡಿದ್ದು, ಒಬ್ಬ ವ್ಯಕ್ತಿಯ ತಲೆಗೆ ಪೆಟ್ಟು ಬಿದ್ದಿದೆ.