Menu

ಪವನ್‌ಗೆ ಜೀರೋ ಟ್ರಾಫಿಕ್: ವಿದ್ಯಾರ್ಥಿಗಳಿಗೆ ಪರೀಕ್ಷೆ ಮಿಸ್

pawan kalyan

ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರಿಗೋಸ್ಕರ ನೀಡಲಾಗಿದ್ದ ಜಿರೋ ಟ್ರಾಫಿಕ್‌ನಿಂದಾಗಿ ಹಲವು ವಿದ್ಯಾರ್ಥಿಗಳು ಜೆಇಇ ಪ್ರವೇಶ ಪರೀಕ್ಷೆಯನ್ನು ತಪ್ಪಿಸಿಕೊಂಡಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ.

ಏಪ್ರಿಲ್ ೨ರಂದು ವಿಶಾಖಪಟ್ಟಣಕ್ಕೆ ಪವನ್ ಕಲ್ಯಾಣ್ ಆಗಮಿಸಿದ್ದರು. ಈ ವೇಳೆ ಅವರಿಗೆ ಹಾಗೂ ಅವರ ಬೆಂಗಾವಲು ಪಡೆಗೆ ಗೋಪಾಲಪಟ್ಟಣಂ-ಪೆಂಡುರ್ತಿ ಮಾರ್ಗದ ಸರ್ವಿಸ್ ರಸ್ತೆ ಬಳಿ ಸಾರ್ವಜನಿಕ ಸಂಚಾರವನ್ನು ಟ್ರಾಫಿಕ್ ಪೊಲೀಸರು ಕೆಲಹೊತ್ತು ನಿಲ್ಲಿಸಿದ್ದರು.

ಇದರಿಂದ ಅಂದು ಬೆಳಿಗ್ಗೆ ಜೆಇಇ ಪ್ರವೇಶ ಪರೀಕ್ಷೆಗೆ ತೆರಳಬೇಕಿದ್ದ ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಟ್ರಾಫಿಕ್ನಲ್ಲೇ ಸಿಲುಕಿಕೊಂಡು ಪರೀಕ್ಷೆ ತಪ್ಪಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ, ಈ ಆರೋಪವನ್ನು ನಗರ ಪೊಲೀಸರು ನಿರಾಕರಿಸಿದ್ದಾರೆ. ಬೆಳಿಗ್ಗೆ ೮.೩೦ರ ನಂತರ ನಾವು ಪವನ್ ಕಲ್ಯಾಣ್ ಅವರಿಗೆ ಜಿರೋ ಟ್ರಾಫಿಕ್ ನೀಡಿದ್ದೇವೆ. ಹೀಗಾಗಿ ಪರೀಕ್ಷೆಗೆ ಹೋಗುವವರಿಗೆ ತೊಂದರೆ ಆಗಿಲ್ಲ ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ಕೆಲ ವೈಎಸ್‌ಆರ್ ಕಾಂಗ್ರೆಸ್ ನಾಯಕರು ಹಾಗೂ ನೆಟ್ಟಿಗರು ಪವನ್ ಕಲ್ಯಾಣ್ ವಿರುದ್ಧ ಹರಿಹಾಯ್ದಿದ್ದಾರೆ. ಪವನ್ ಕಲ್ಯಾಣ್ ಅವರು ಇನ್ನಾದರೂ ಸಿನಿಮಾ ಶೈಲಿಯನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳುವುದನ್ನು ಇನ್ನಾದರೂ ಬಿಡಬೇಕು ಎಂದು ಕಿಡಿಕಾರಿದ್ದಾರೆ.

Related Posts

Leave a Reply

Your email address will not be published. Required fields are marked *