ಆಡಳಿತ
ಬೆಳಗಾವಿಯಲ್ಲಿ ಡಿಸೆಂಬರ್ 7ರಿಂದ ಚಳಿಗಾಲದ ಅಧಿವೇಶನ: ರಾಜ್ಯ ಸರ್ಕಾರದ ಸಿದ್ಧತೆ
ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕ ವಿಧಾನಮಂಡಲದ 2026ನೇ ಸಾಲಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7ರಿಂದ ಬೆಳಗಾವಿಯ ಐತಿಹಾಸಿಕ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ನಿರ್ಧರಿಸಿದೆ. ವಿಧಾನಸಭೆ ಮತ್ತು ವಿಧಾನಪರಿಷತ್ನ ಉಭಯ ಸದನಗಳ ಕಲಾಪವನ್ನು ಸುಮಾರು 10 ದಿನಗಳ ಕಾಲ ಯಶಸ್ವಿಯಾಗಿ ನಡೆಸಲು ಸಿದ್ಧತೆಗಳು ಚುರುಕುಗೊಂಡಿವೆ. ಅಧಿಕೃತ ಪೂರ್ವಸಿದ್ಧತೆಗೆ ಸರ್ಕಾರದ ಸೂಚನೆ ಅಕ್ಟೋಬರ್ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ ಅಧಿವೇಶನದ ದಿನಾಂಕಗಳ ಕುರಿತು ಚರ್ಚೆ ನಡೆಸಲಾಗಿತ್ತು.
ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 87 ಕೆಎಎಸ್ ಅಧಿಕಾರಿಗಳ ವರ್ಗಾವಣೆ
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಸಾರ್ವಜನಿಕ ಸೇವೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ಕರ್ನಾಟಕ ಆಡಳಿತ ಸೇವೆ (ಕೆಎಎಸ್) ವೃಂದದ



