Menu

ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ಸಾಧ್ಯವಿಲ್ಲ ಎಂದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿನ ಅರಣ್ಯ ಪ್ರದೇಶವನ್ನು ಯಾವುದೇ ಖಾಸಗಿ ವ್ಯಕ್ತಿಯ ಪರವಾಗಿ ಮಂಜೂರು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅರಣ್ಯ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಸಬಾ ಹೋಬಳಿಯ ಮುಮ್ಮಡಿಕಾವಲ್ ಗ್ರಾಮದ ಅರಣ್ಯ ಪ್ರದೇಶದಲ್ಲಿನ ಜಮೀನನ್ನು ಪೋಡಿ ಮತ್ತು ದುರಸ್ತಿ ಮಾಡಲು ನಿರ್ದೇಶಿಸಿ ಏಕಸದಸ್ಯ ನ್ಯಾಯಪೀಠ ನೀಡಿದ್ದ