Menu

ಜೆಸಿಬಿ ಘರ್ಜನೆ: ಮಾಜಿ ಸಚಿವ ಕಬ್ಜಾ ಮಾಡಿದ್ದ ಸರ್ಕಾರಿ ಜಮೀನು ತೆರವು!

ಉದಯಕಾಲ ನ್ಯೂಸ್, ಬಳ್ಳಾರಿ: ನಗರದಲ್ಲಿ ಸರ್ಕಾರಿ ಜಮೀನು ಒತ್ತುವರಿದಾರರ ವಿರುದ್ಧ ಬಳ್ಳಾರಿ ಜಿಲ್ಲಾಡಳಿತವು ಸಮರ ಸಾರಿದ್ದು, ಸೋಮವಾರ ಬೆಳ್ಳಂಬೆಳಗ್ಗೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಜೆಸಿಬಿಗಳ ಮೂಲಕ ಬೃಹತ್ ತೆರವು ಕಾರ್ಯಾಚರಣೆ ನಡೆಸಿದೆ.ರಾಜ್ಯ ಕಾಂಗ್ರೆಸ್ ಸರ್ಕಾರದ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ಜಿಲ್ಲಾಡಳಿತವು ಪ್ರಭಾವಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಂಡಿರುವುದು ಈ ಕಾರ್ಯಾಚರಣೆಯ ಮೂಲಕ ಸಾಬೀತಾಗಿದೆ. ಬೃಹತ್ ಕಾಂಪೌಂಡ್ ಗೋಡೆ ಧ್ವಂಸ ನಗರದ ಸರ್ವೆ ನಂಬರ್ 607/1ಎ 1ಎ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ

ಶಾಸಕ ಕೆ.ವೈ. ನಂಜೇಗೌಡ ವಿರುದ್ಧ ಇಡಿ ದಾಖಲಿಸಿದ್ದ ದೂರು ರದ್ದುಪಡಿಸಿದ ಹೈಕೋರ್ಟ್

ಉದಯಕಾಲ ನ್ಯೂಸ್, ಬೆಂಗಳೂರು: ಭೂಮಿ ಅಕ್ರಮ ಮಂಜೂರಾತಿ ಹಾಗೂ ಕೋಮುಲ್ (KOMUL) ನೇಮಕಾತಿ ಅಕ್ರಮ ಆರೋಪಗಳಿಗೆ ಸಂಬಂಧಿಸಿದಂತೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಇಸಿಐಆರ್ ಹಾಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ಖಾಸಗಿ

ರೇಣುಕಾಸ್ವಾಮಿ ಕೊಲೆ ಕೇಸಿನ ಮಾಫಿ ಸಾಕ್ಷಿ ಪ್ರದೋಷ್‌ ತಂದೆಯ ತಿಥಿಗೆ ಹೋಗಲು ಕೋರ್ಟ್ ಅನುಮತಿ

ಉದಯಕಾಲ ನ್ಯೂಸ್, ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್‌ಗೆ ತಮ್ಮ ತಂದೆಯ ಮೊದಲ ವರ್ಷದ ವಾರ್ಷಿಕ ತಿಥಿ (ಪಿತೃಕಾರ್ಯ) ಕಾರ್ಯದಲ್ಲಿ ಭಾಗಿಯಾಗಲು ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಅನುಮತಿ ನೀಡಿದೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಪ್ರದೋಷ್ ಪರ ವಕೀಲರು

ಅತ್ಯಾಚಾರ ಪ್ರಕರಣದ ತರುಣ್ ತೇಜಪಾಲ್ ಶಿಕ್ಷೆ ಅಮಾನತು ಮಾಡಲು ನಿರಾಕರಿಸಿದ ಸುಪ್ರೀಂ

ಉದಯಕಾಲ ನ್ಯೂಸ್, ನವದೆಹಲಿ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ 2013ರ ಗೋವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ತೆಹೆಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ತರುಣ್ ತೇಜಪಾಲ್ ಅವರಿಗೆ ಬಾಂಬೆ ಹೈಕೋರ್ಟ್ ವಿಧಿಸಿರುವ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು

ಸ್ಥಳೀಯ ಸಂಸ್ಥೆಗಳ ಚುನಾವಣೆ: ಹೈಕೋರ್ಟ್‌ಗೆ ವಾರ್ಡ್ ಮೀಸಲಾತಿ ಸಮಿತಿಯ ಮಾಹಿತಿ ನೀಡಿದ ಸರ್ಕಾರ

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಗಿದು ಚುನಾವಣೆ ನಡೆಯಬೇಕಿರುವ ವಿವಿಧ ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸುವ ಸಲುವಾಗಿ ರಾಜ್ಯ ಸರ್ಕಾರವು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.

ಮಾಜಿ ನಕ್ಸಲ್ ಮುಂಡಗಾರು ಲತಾ ಕಡಬ ನ್ಯಾಯಾಲಯಕ್ಕೆ: ವಿಚಾರಣೆ ಬಳಿಕ ಪೊಲೀಸರ ವಶಕ್ಕೆ

ಉದಯಕಾಲ ನ್ಯೂಸ್, ದಕ್ಷಿಣ ಕನ್ನಡ: ಪಶ್ಚಿಮ ಘಟ್ಟದ ಕಾಡುಗಳಲ್ಲಿ ದೀರ್ಘಕಾಲ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು, ಇತ್ತೀಚೆಗೆ ಸರ್ಕಾರದ ಮುಂದೆ ಶರಣಾಗಿರುವ ಪ್ರಮುಖ ಮಾಜಿ ನಕ್ಸಲ್ ನಾಯಕಿ ಮುಂಡಗಾರು ಲತಾ ಅಲಿಯಾಸ್ ಶ್ರೀಲತಾ ಅವರನ್ನು 2018ರ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಸಂಚಾರಿ

ಮೈಸೂರು ಅರಮನೆ ಖಾಸಗಿ ಸ್ವತ್ತು, ಸರ್ಕಾರ ಕಟ್ಟಿಸಿಲ್ಲ: ಪ್ರಮೋದಾ ದೇವಿ ಒಡೆಯರ್

ಉದಯಕಾಲ ನ್ಯೂಸ್, ಮೈಸೂರು: ಮೈಸೂರು ಅರಮನೆಯು ಸಂಪೂರ್ಣವಾಗಿ ಖಾಸಗಿ ಸ್ವತ್ತಾಗಿದ್ದು, ಇದನ್ನು ಸರ್ಕಾರ ಕಟ್ಟಿಸಿಲ್ಲ. ಸರ್ಕಾರದ ಔದಾರ್ಯದಿಂದ ನಾವು ಅರಮನೆಯಲ್ಲಿ ವಾಸಿಸುತ್ತಿಲ್ಲ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರಮನೆಯ ಮಾಲೀಕತ್ವ, ದಸರಾ

ಎರಡು ಮಕ್ಕಳಿಗಿಂತ ಹೆಚ್ಚಿದ್ದವರು ಚುನಾವಣೆಗೆ ಅನರ್ಹರು ಕಾನೂನು ಅಪ್ರಸ್ತುತ: ಸುಪ್ರೀಂ ತೀರ್ಪು

ಉದಯಕಾಲ ನ್ಯೂಸ್, ನವೆದೆಹಲಿ: ದೇಶದಲ್ಲಿ ಜನಸಂಖ್ಯೆ ನಿಯಂತ್ರಣದ ನಿಟ್ಟಿನಲ್ಲಿ ದಶಕಗಳ ಹಿಂದೆ ಜಾರಿಗೆ ತರಲಾಗಿದ್ದ ‘ಎರಡು ಮಕ್ಕಳ ನಿಯಮ’ ಇಂದಿನ ಬದಲಾದ ಜನಸಂಖ್ಯಾ ಪರಿಸ್ಥಿತಿಯಲ್ಲಿ ತನ್ನ ಪ್ರಸ್ತುತತೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸ್ಥಳೀಯ ಸಂಸ್ಥೆಗಳ

ವಕೀಲರ ಮೇಲೆ ಹಲ್ಲೆ, ಕೊಲೆಗೆ ಖಂಡನೆ: ವಕೀಲರ ಸಂಘದಿಂದ ಬೃಹತ್ ಪ್ರತಿಭಟನೆ

ಉದಯಕಾಲ ನ್ಯೂಸ್, ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ವಕೀಲರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ಹತ್ಯೆ ಪ್ರಕರಣಗಳು ಹಾಗೂ ಬೆದರಿಕೆಗಳನ್ನು ಖಂಡಿಸಿ ಮತ್ತು ವೃತ್ತಿನಿರತ ವಕೀಲರಿಗೆ ಕಟ್ಟುನಿಟ್ಟಿನ ಭದ್ರತೆ ಹಾಗೂ ಪರಿಣಾಮಕಾರಿ ಕಾನೂನು ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ

ಹಸಿರು ಪಟಾಕಿಗೆ ಒತ್ತು, ಪಟಾಕಿ ಸಿಡಿಸಲು ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಅವಕಾಶ

ಉದಯಕಾಲ ನ್ಯೂಸ್, ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮಾಚರಣೆಯ ವೇಳೆ ಸಾರ್ವಜನಿಕ ಸುರಕ್ಷತೆ ಕಾಪಾಡಲು ಹಾಗೂ ಪರಿಸರ ಸ್ನೇಹಿ ವಾತಾವರಣ ನಿರ್ಮಿಸಲು ರಾಜ್ಯ ಪೊಲೀಸ್ ಇಲಾಖೆಯು ಪ್ರಮುಖ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ವಾಯು ಮತ್ತು ಶಬ್ದ ಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ಕೇವಲ ಹಸಿರು ಪಟಾಕಿಗಳನ್ನು