ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರದಲ್ಲಿ ಲಘು ಭೂಕಂಪ: ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲು, ಜನ ಆತಂಕಪಡುವಂತಿಲ್ಲ ಎಂದ KSNDMC
ಉದಯಕಾಲ ನ್ಯೂಸ್, ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇಂದು ಬೆಳಗ್ಗೆ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 3.0 ಎಂದು ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಅಧಿಕೃತವಾಗಿ ತಿಳಿಸಿದೆ. ಅಕ್ಟೋಬರ್ 23ರಂದು ಬೆಳಗ್ಗೆ 9:01 ನಿಮಿಷಕ್ಕೆ ಈ ಭೂಕಂಪನ ಸಂಭವಿಸಿದೆ. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಮ್ಮೋಜನಹಳ್ಳಿ ಗ್ರಾಮದಿಂದ ಉತ್ತರಕ್ಕೆ ಸುಮಾರು 0.5 ಕಿ.ಮೀ ದೂರದಲ್ಲಿ ಹಾಗೂ ಭೂಮಿಯ

