Menu

‘ಅರ್ನಾಬ್’ ಚಂಡಮಾರುತ ಅಬ್ಬರ: 53 ರೈಲು ಸಂಚಾರ ರದ್ದು, ಶಾಲಾ-ಕಾಲೇಜುಗಳಿಗೆ ರಜೆ

ಉದಯಕಾಲ ನ್ಯೂಸ್, ವಿಶಾಖಪಟ್ಟಣಂ/ಅಮರಾವತಿ: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಅರ್ನಾಬ್’ ಚಂಡಮಾರುತವು (Cyclone Arnab) ಅತ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಪ್ರಚಂಡ ಬಿರುಗಾಳಿಯ ಅಬ್ಬರ ಶುರುವಾಗಿದೆ. ಚಂಡಮಾರುತದ ಪ್ರಭಾವದಿಂದ ವ್ಯಾಪಕ ಹಾನಿಯಾಗುವ ಸಾಧ್ಯತೆಯಿರುವುದರಿಂದ ರಾಜ್ಯ ಸರ್ಕಾರ ಹಾಗೂ ಆಡಳಿತಯಂತ್ರವು ಸಂಪೂರ್ಣ ಸನ್ನದ್ಧವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಶಾಲೆ-ಅಂಗನವಾಡಿಗಳಿಗೆ ರಜೆ ಚಂಡಮಾರುತದಿಂದ ತೀವ್ರವಾಗಿ ಬಾಧಿತವಾಗುವ